ಕೆಯ್ಯೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 26 ರ ರಾತ್ರಿ ಕೆಯ್ಯೂರು ಗ್ರಾಮದಲ್ಲಿ ಸಂಭವಿಸಿದೆ.

ಶೇಷಪ್ಪ ಪೂಜಾರಿ (75) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶೇಷಪ್ಪ ಪೂಜಾರಿಯವರ ಅಳಿಯ ಗೋಪಾಲ ಪೂಜಾರಿ ತನ್ನ ಅತ್ತೆ, ಹೆಂಡತಿ, ಮಕ್ಕಳೊಂದಿಗೆ ಕೆಯ್ಯೂರು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಗೆ ಹೋಗಿದ್ದು, ಈ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದ ಶೇಷಪ್ಪ ಪೂಜಾರಿಯವರು ಮನೆಯ ಗೋಡೆಗೆ ಅಡ್ಡವಾಗಿ ಹಾಕಿದ ತೆಂಗಿನ ಮರದ ಅಡ್ಡಕ್ಕೆ ನೈಲಾನ್ ಹಗ್ಗವನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top