ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಬುಧವಾರ ಮಧ್ಯಾಹ್ನ 11.30ಕ್ಕೆ ದೆಹಲಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಅವರ ಸರ್ಕಾರಿ ಕಾರ್ಯಕ್ರಗಳನ್ನು ರದ್ದು ಮಾಡಲಾಗಿದೆ ಎಂದು ಹೇಳಲಾಗಿದೆ.
ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವುದು ಬಹುತೇಕ ಖಚಿತ.
ಇಂದು ಸಿಎಂ ಬೊಮ್ಮಾಯಿ ಅವರು ಕೊಪ್ಪಳ ಹಾಗೂ ತವರು ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಚಾಲನೆ ನೀಡಬೇಕಿತ್ತು. ಕೆರೆಗಳಿಗೆ ನೀರು ತುಂಬುವ ಯೋಜನೆ ಚಾಲನೆ ಹಾಗೂ ಶಿಗ್ಗಾಂವಿ, ರಾಣೆಬೆನ್ನೂರಿನಲ್ಲಿ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ಬುಧವಾರ ಬೆಳಿಗ್ಗೆ ಆ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.
ಬುಧವಾರ ಬೆಳಗ್ಗೆ 11.30ಕ್ಕೆ ದೆಹಲಿಯ ವಿಜ್ಞಾನ ಭವದಲ್ಲಿ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಕರ್ನಾಟಕದ 224 ವಿಧಾನಸಭೆ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಇಂದು ದಿನಾಂಕ ಪ್ರಕಟವಾಗುವ ಸಾಧ್ಯತೆ ಇದೆ.