ಬೆಂಗಳೂರು : ಈ ಸಲ ನಡೆಯುವ ವಿಧಾನಸಭೆ ಚುನಾವಣೆ ಮೆ 10 ಬುಧವಾರ ಬರುತ್ತದೆ. ಬುಧವಾರವನ್ನೇ ಆಯ್ಕೆ ಮಾಡಿಕೊಳ್ಳಲು ಚುನಾವಣಾ ಆಯೋಗ ಕಾರಣ ಕೊಟ್ಟಿದೆ. ಒಂದು ವೇಳೆ ಚುನಾವಣೆ ಸೋಮವಾರ ನಿಗದಿ ಮಾಡಿದ್ದರೆ ಆ ದಿನ ರಜೆಯಾದ್ದರಿಂದ ದೀರ್ಘ ವಾರಾಂತ್ಯ ಎಂದು ತೆರಳುವವರ ಸಂಖ್ಯೆ ಹೆಚ್ಚಾಗುತ್ತಿತ್ತು. ಇದರಿಂದ ಮತದಾನ ಕಡಿಮೆಯಾಗುತ್ತಿತ್ತು. ಮಂಗಳವಾರ ಚುನಾವಣೆ ನಿಗದಿ ಮಾಡಿದ್ದರೂ ಸೋಮವಾರ ಒಂದು ದಿನ ರಜೆ ಪಡೆದುಕೊಂಡರೆ ಒಟ್ಟು ನಾಲ್ಕು ದಿನಗಳ ರಜೆ ಸಿಗುತ್ತದೆ ಎಂದು ಪ್ರವಾಸ ತೆರಳುತ್ತಾರೆ.
ಬುಧವಾರವಾದರೆ ಹೆಚ್ಚುವರಿಯಾಗಿ ಎರಡು ದಿನ ರಜೆ ಮಾಡಬೇಕಿರುವುದರಿಂದ ಹಾಗೆ ಮಾಡುವವರ ಸಂಖ್ಯೆ ಕಡಿಮೆಯಾಗಬಹುದು ಎಂಬ ಲೆಕ್ಕಾಚಾರ ಚುನಾವಣಾ ಆಯೋಗದ್ದು. ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆ ಪ್ರಕ್ರಿಯೆಯಲ್ಲಿ ಹೆಚ್ಚು ಮಂದಿ ಭಾಗವಹಿಸಬೇಕೆಂದು ಕರ್ನಾಟಕದ ಮತದಾರರಲ್ಲಿ ಮನವಿ ಮಾಡುತ್ತೇನೆ ಎಂದೂ ಆಯುಕ್ತರು ಹೇಳಿದ್ದಾರೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರು ನಗರದಲ್ಲಿ ಮತದಾನ ಪ್ರಮಾಣ ಬಹಳ ಕಡಿಮೆಯಿತ್ತು. ಸರಣಿ ರಜೆ ಸಿಕ್ಕಿದ ಕಾರಣ ನಗರವಾಸಿಗಳೆಲ್ಲ ರಜೆ ಹೊಂದಾಣಿಕೆ ಮಾಡಿಕೊಂಡು ಪ್ರವಾಸ ಹೋದದ್ದು ಇದಕ್ಕೆ ಕಾರಣ ಎನ್ನಲಾಗಿತ್ತು. ಹೀಗಾಗಿ ಆಯೋಗ ಈ ಸಲ ಜನರಿಗೆ ಸರಣಿ ರಜೆ ಹಾಕುವ ಅವಕಾಸ ಸಿಗಬಾರದೆಂದು ವಾರದ ಮದ್ಯೆ ಚುನಾವಣೆ ಇಟ್ಟಿದೆ