ಈ ಸಲ ಮನೆಯಿಂದಲೇ ಮತಚಲಾಯಿಸುವ ಸೌಲಭ್ಯ
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ದೇಶದಲ್ಲೇ ಇದೇ ಮೊದಲ ಬಾರಿಗೆ ಹಿರಿಯ ಮತ್ತು ವಿಶೇಷ ಚೇತನ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ (ವೋಟ್ ಫ್ರಮ್ ಹೋಮ್) ಸೌಲಭ್ಯ ಕಲ್ಪಿಸಲಾಗಿದೆ. ನಿನ್ನೆ ಚುನಾವಣೆ ದಿನಾಂಕ ಘೋಷಣೆ ಮಾಡುವಾಗ ಮುಖ್ಯ ಚುನಾವಣಾ ಆಯಕ್ತ ರಾಜೀವ್ ಕುಮಾರ್ ಇದೇ ಮೊದಲ ಬಾರಿಗೆ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ (ವೋಟ್ ಫ್ರಮ್ ಹೋಮ್) ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.
ದೇಶದಲ್ಲಿ ಇದೇ ಮೊದಲ ಬಾರಿಗೆ ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರ ಅನುಕೂಲಕ್ಕಾಗಿ ವೋಟ್ ಫ್ರಮ್ ಹೋಮ್ ಸೌಲಭ್ಯವನ್ನು ಕಲ್ಪಿಸಲಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಈ ಸೌಲಭ್ಯವನ್ನು ಮೊದಲ ಬಾರಿಗೆ ಪರಿಚಯಿಸಲಾಗುತ್ತಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.
80 ವರ್ಷ ಮೇಲ್ಪಟ್ಟ ಹಿರಿಯ ಮತದಾರರುಮನೆಯಿಂದಲೇ ಮತ ಚಲಾಯಿಸುವ ಅವಕಾಶವನ್ನು ಪಡೆದುಕೊಂಡಿದ್ದಾರೆ. ಅದೇ ರೀತಿ ವಿಶೇಷ ಚೇತನ ಮತದಾರರು ಕೂಡ ಈ ಸೌಲಭ್ಯವನ್ನು ಬಳಸಿಕೊಂಡು, ತಮ್ಮ ಮನೆಯಿಂದಲೇ ಮತದಾನ ಮಾಡಬಹುದು.
ಈ ಅವಕಾಶವನ್ನು ಬಳಸಿಕೊಳ್ಳುವ ಅಪೇಕ್ಷೆ ಹೊಂದಿರುವವರು ಮತದಾನಕ್ಕೆ 5 ದಿನ ಮೊದಲೇ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೀಗೆ ನೋಂದಾಯಿತರಾದ ಮತದಾರರ ಮನೆಗೆ ತೆರಳುವ ಚುನಾವಣಾ ಸಿಬ್ಬಂದಿ ಅಲ್ಲಿಂದಲೇ ಅವರ ಮತವನ್ನು ದಾಖಲಿಸುತ್ತಾರೆ. ಹೆಸರು ನೋಂದಾವಣೆ ಮಾಡಿಕೊಳ್ಳದ ಹಿರಿಯ ಮತ್ತು ವಿಶೇಷ ಚೇತನ ಮತದಾರರು, ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕಾಗುತ್ತದೆ.
ಹಿರಿಯ ಮತ್ತು ವಿಶೇಷ ಚೇತನ ಮತದಾರರಿಗೆಂದೇ ಈ ಸೌಲಭ್ಯ ಕಲ್ಪಿಸಲಾಗಿದ್ದು, ಈ ಮತದಾರರು ಈ ಸೌಲಭ್ಯ ಬಳಸಿಕೊಂಡು ಮತದಾನ ಮಾಡಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮನವಿ ಮಾಡಿದ್ದಾರೆ. ಕರ್ನಾಟಕದಲ್ಲಿ ಈ ಸೌಲಭ್ಯದ ಪರಿಣಾಮಗಳನ್ನು ನೋಡಿಕೊಂಡು ಭವಿಷ್ಯದಲ್ಲಿ ದೇಶದ ಇತರ ರಾಜ್ಯಗಳಲ್ಲಿ ನಡೆಯುವ ಚುನಾವಣೆಯಲ್ಲೂ, ಈ ಸೌಲಭ್ಯವನ್ನು ಪರಿಚಯಿಸಲು ಚುನಾವಣಾ ಆಯೋಗ ಮುಂದಾಗಿದೆ.