ಅವರ ಸಾಧನೆ ಎಲ್ಲರಿಗೂ ಪ್ರೇರಣೆ
(ಭಾಗ 7)
ಮೊದಲಾಗಿ ಎಸೆಸೆಲ್ಸಿ ಪರೀಕ್ಷೆಗೆ ಆಲ್ ದ ಬೆಸ್ಟ್. ಇಡೀ ವರ್ಷ ಒಂದು ಪರೀಕ್ಷೆಗಾಗಿ ಕಷ್ಟಪಟ್ಟು ಓದಿರುವ ನಿಮಗೆ ಅಭಿನಂದನೆಗಳು. ಹಾಗೆಯೇ ನಿಮ್ಮನ್ನು ಪರೀಕ್ಷೆಗಾಗಿ ಪ್ರಿಪೇರ್ ಮಾಡಿದ ನಿಮ್ಮ ಅಧ್ಯಾಪಕರಿಗೂ ಅಭಿನಂದನೆಗಳು.
ಇವತ್ತು ನಾನು ನಿಮಗೆ ಪರೀಕ್ಷೆಗಳ ಬಗ್ಗೆ ಏನೂ ಹೇಳುವುದಿಲ್ಲ. ಇಡೀ ವರ್ಷ ನಿಮಗೆ ಅದನ್ನು ಹಲವು ಬಾರಿ ಹೇಳಿ ಆಗಿದೆ. ಇವತ್ತು ನಾನು ನಿಮಗೆ ತುಂಬಾ ಸ್ಫೂರ್ತಿ ತುಂಬುವ ಮೂರು ವ್ಯಕ್ತಿತ್ವಗಳು ಮತ್ತು ಅದಕ್ಕೆ ಪೂರಕವಾದ ಮೂರು ಘಟನೆಗಳನ್ನು ವಿವರಿಸಬೇಕು. ಓದುತ್ತಾ ಹೋಗಿ…
1) ವಿಶ್ವ ವಿಜಯೀ ಸೋಟೊ ಮೇಯರ್

ಜಗತ್ತಿನ ಬೆಸ್ಟ್ ಹೈ ಜಂಪರ್ ಯಾರು ಎಂದು ಗೂಗಲ್ ಸರ್ಚ್ ಮಾಡಿದರೆ ಬರುವ ಮೊದಲ ಹೆಸರು ಜೆವಿಯರ್ ಸೋಟೊ ಮೇಯರ್. ಆತ ಕ್ಯೂಬಾ ದೇಶದ ಮಹೋನ್ನತ ಹೈ ಜಂಪರ್. 1992ರ ಒಲಿಂಪಿಕ್ಸ್ ಕೂಟದಲ್ಲಿ 2.45 ಮೀಟರ್ ಎತ್ತರ ಜಿಗಿದು ವಿಶ್ವದಾಖಲೆ ಮಾಡಿದ್ದ. ಅಷ್ಟು ಎತ್ತರ ಯಾರಿಗೂ ಹಾರಲು ಸಾಧ್ಯವೇ ಇಲ್ಲ ಎಂದು ಕ್ರೀಡಾ ವಿಮರ್ಶಕರು ಹೇಳಿದ್ದರು. ನಿನಗೆ ಅಷ್ಟು ಎತ್ತರ ಹಾರಲು ಹೇಗೆ ಸಾಧ್ಯ ಆಯಿತು ಎಂದು ಅವನನ್ನು ಪತ್ರಕರ್ತರು ಕೇಳಿದಾಗ ಅವನು ಕೊಟ್ಟ ಉತ್ತರ ಅದ್ಭುತ ಆಗಿತ್ತು…
My HEART jumps FIRST and then my BODY follows!
ಅಂದರೆ ನಾನು ಹಾರುವಾಗ ನನ್ನ ಹೃದಯವು ಮೊದಲು ಹಾರುತ್ತದೆ, ಮತ್ತು ನನ್ನ ದೇಹವು ಅದನ್ನು ಹಿಂಬಾಲಿಸುತ್ತದೆ. ಯಾವುದೇ ಕೆಲಸವನ್ನು ಭಾವನೆಯನ್ನು ಹಾಕಿ ಮಾಡಿದರೆ ಫಲಿತಾಂಶ ಅದ್ಭುತವಾಗಿ ಇರುತ್ತದೆ ಅನ್ನುವುದಕ್ಕೆ ಸೋಟೊ ಮೇಯರ್ ಸಾಧನೆ ಒಂದು ಅದ್ಭುತ ನಿದರ್ಶನ.
2) ವಿಶ್ವ ವಿಜಯಿ ಈಜು ಪಟು ಮೈಕೆಲ್ ಫೆಲ್ಪ್ಸ್
ಜಗತ್ತಿನ ಬೆಸ್ಟ್ ಸ್ವಿಮ್ಮರ್ ಯಾರು ಎಂಬ ಪ್ರಶ್ನೆಗೆ ಗೂಗಲ್ ಕೊಡುವ ನೇರ ಉತ್ತರ ಅಮೆರಿಕಾದ ಮೈಕೆಲ್ ಫೆಲ್ಪ್ಸ್ ಆತ ಅಮೆರಿಕದ ಈಜುಪಟು. ಆತನನ್ನು ‘ಬಾಲ್ಟಿಮೋರನ ಬುಲೆಟ್’ ಎಂದೇ ಕರೆಯಲಾಗುತ್ತದೆ. ಆತ ಎರಡು ಒಲಿಪಿಕ್ಸ್ ಕೂಟಗಳಲ್ಲಿ ಗೆದ್ದ ಒಟ್ಟು ಮೆಡಲ್‌ಗಳ ಸಂಖ್ಯೆ ಬರೋಬ್ಬರಿ 28. ಅದರಲ್ಲಿ 23 ಚಿನ್ನದ ಪದಕಗಳು, 3 ಬೆಳ್ಳಿಯ ಪದಕಗಳು, 2 ಕಂಚಿನ ಪದಕಗಳು.
ಅಷ್ಟು ಒಲಿಂಪಿಕ್ಸ್ ಪದಕಗಳನ್ನು ಇದುವರೆಗೆ ಯಾರೂ ಗೆಲ್ಲಲು ಸಾಧ್ಯವೇ ಆಗಲಿಲ್ಲ. ಮುಂದೆ ಸಾಧ್ಯವೂ ಇಲ್ಲ. ಭಗವಂತ ಅವನನ್ನು ಈಜುವುದಕ್ಕಾಗಿ ಸೃಷ್ಟಿ ಮಾಡಿರಬೇಕು. ಅದೇ ರೀತಿ ವಿಶ್ವ ಚಾಂಪಿಯನ್‌ಶಿಪ್ ಕೂಟಗಳಲ್ಲಿ ಆತನದ್ದು ಅದ್ಭುತವಾದ ಸಾಧನೆ. 26 ಚಿನ್ನ, 6 ಬೆಳ್ಳಿ, 1 ಕಂಚು. ಆತ ತನ್ನ ಜೀವನದ ಅರ್ಧಕ್ಕಿಂತ ಹೆಚ್ಚು ಭಾಗವನ್ನು ಸ್ವಿಮ್ಮಿಂಗ್ ಪೂಲ್‌ಗಳಲ್ಲಿ ಕಳೆದನು ಅಂದರೆ ಅದು ಅದ್ಭುತ. ಒಂದು ದಿನವೂ ಪ್ರಾಕ್ಟೀಸ್ ಮಿಸ್ ಮಾಡದೆ ದಿನಕ್ಕೆ 12 ಗಂಟೆ ನೀರಿನಲ್ಲಿ ಈಜುತ್ತಾ ಇರುತ್ತಿದ್ದ.
ನಮಗೆಲ್ಲ ತಿಳಿದಿರುವಂತೆ ಸೆಪ್ಟೆಂಬರ್ 11, 2001ರಂದು ಅಮೆರಿಕಾದ ಟ್ವಿನ್ ಟವರ್ ಮೇಲೆ ಭಯೋತ್ಪಾದಕ ದಾಳಿ ನಡೆದು ಇಡೀ ಅಮೆರಿಕ ತಲ್ಲಣ ಪಟ್ಟ ದಿನ ಕೂಡ ಬೆಳಗ್ಗೆ ಮೈಕೆಲ್ ಈಜುಕೊಳದಲ್ಲಿ ಈಜುತ್ತ ತನ್ನ ಕೋಚ್‌ಗೆ ಕಾಲ್ ಮಾಡಿ, ಸರ್ ಎಲ್ಲಿದ್ದೀರಿ? ನಾನಾಗಲೇ ಪೂಲಲ್ಲಿ ರೆಡಿ ಇದ್ದೇನೆ ಎಂದನಂತೆ.
ಯಾವ ಕ್ಷೇತ್ರದಲ್ಲಾದರೂ ಸಾಧನೆ ಮಾಡಬೇಕು ಎಂಬ ಹಸಿವು ಇದ್ದವರು ಅದನ್ನು ತಪಸ್ಸಿನಂತೆ ಸ್ವೀಕಾರ ಮಾಡಿದರೆ ಮಾತ್ರ ಯಶಸ್ಸು ದೊರೆಯಲು ಸಾಧ್ಯ ಎಂದು ಮೈಕೆಲ್ ಫೆಲ್ಪ್ಸ್ ನಮಗೆ ತೋರಿಸಿಕೊಟ್ಟಿದ್ದಾನೆ.
3) ದಾಖಲೆಗಳ ಮೇಲೆ ದಾಖಲೆ ಬರೆದ ಸರ್ಗೆಯಿ ಬೂಬ್ಕಾ

ವಿಶ್ವಮಟ್ಟದ ಬೆಸ್ಟ್ ಪೋಲ್ ವಾಲ್ಟರ್ ಯಾರು ಮತ್ತು ಅತಿ ಹೆಚ್ಚು ಕ್ರೀಡೆಯ ವಿಶ್ವದಾಖಲೆ ಹೊಂದಿದವರು? ಈ ಎರಡೂ ಪ್ರಶ್ನೆಗೆ ಗೂಗಲ್ ಥಟ್ಟನೆ ನೀಡುವ ಉತ್ತರ ಯುಕ್ರೇನ್ ದೇಶದ ಸರ್ಗೆಯಿ ಬೂಬ್ಕಾ. ಆತನ ಬದುಕೇ ಒಂದು ಅದ್ಭುತ ಯಶೋಗಾಥೆ. ಪೋಲ್ ವಾಲ್ಟ್ ಎಂಬ ಕ್ಲಿಷ್ಟಕರವಾದ ಸ್ಪರ್ಧೆಯಲ್ಲಿ ಆತನಿಗೆ ದಶಕಗಳ ಕಾಲ ಸ್ಪರ್ಧಿಯೆ ಇರಲಿಲ್ಲ. ಬರೋಬ್ಬರಿ ಮೂವತ್ತೈದು ಬಾರಿ ಆತ ತನ್ನದೇ ರೆಕಾರ್ಡ್ ಮುರಿಯುತ್ತಾ ಹೋದ. ತನ್ನ ಸ್ಪರ್ಧಾ ಅವಧಿಯಲ್ಲಿ ಆತನು ಒಮ್ಮೆ ಮಾತ್ರ ತನ್ನ ವಿಶ್ವದಾಖಲೆಯನ್ನು ಕಳೆದುಕೊಂಡಿದ್ದನು.
ನಿವೃತ್ತಿ ಹೊಂದುವಾಗ ಹೇಳಿದ ಮಾತು ನನಗೆ ಭಾರೀ ಪ್ರೇರಣೆ ಕೊಟ್ಟಿದೆ.
ನಾನು ಇಡೀ ಜೀವನದಲ್ಲಿ ಯಾರ ಜೊತೆಯೂ ಸ್ಪರ್ಧೆ ಮಾಡಲು ಹೋಗಲಿಲ್ಲ. ನನಗೆ ನನ್ನ ಹಿಂದಿನ ಸಾಧನೆಗಳೇ ಬೆಂಚ್ ಮಾರ್ಕ್. ನನ್ನ ನಿಜವಾದ ಸಾಮರ್ಥ್ಯದ ಅಲ್ಟಿಮೇಟ್ ಜಂಪ್ ಇನ್ನೂ ಬಾಕಿ ಇದೆ.
ಬೂಬ್ಕಾ ಹೇಳಿದ ಮಾತುಗಳನ್ನು ವಿವರಿಸುವ ಅಗತ್ಯ ಇಲ್ಲ ಎಂದು ನನಗೆ ಅನಿಸುತ್ತದೆ.
ಈ ಮೂವರು ಶಿಖರ ಸಾಧಕರ ಸಾಧನೆಗಳೇ ಇಂದಿನಿಂದ ನಿಮಗೆ ಸ್ಫೂರ್ತಿಯಾಗಿ ನಿಲ್ಲಲಿ.
ನಿಮಗೆ ಶುಭವಾಗಲಿ.

✒️ರಾಜೇಂದ್ರ ಭಟ್ ಕೆ.
ಜೇಸಿ ರಾಷ್ಟ್ರೀಯ ತರಬೇತಿದಾರರು.
ರಾಜೇಂದ್ರ ಭಟ್ ಕೆ.
ಜೇಸಿ ರಾಷ್ಟ್ರೀಯ ತರಬೇತಿದಾರರು.
ರಾಜೇಂದ್ರ ಭಟ್ ಕೆ.
ಜೇಸಿ ರಾಷ್ಟ್ರೀಯ ತರಬೇತಿದಾರರು.