ದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣಪತ್ರ ಕೇಳಿದ್ದ ದೆಹಲಿ ಸಿಎಂ ಅರವಿಂದ ಕೇಜ್ರೀವಾಲ್ ಅವರಿಗೆ ಗುಜರಾತ್ ಹೈಕೋರ್ಟ್ ಮಾ. 31 ರಂದು 25 ಸಾವಿರ ರೂ. ದಂಡ ವಿಧಿಸಿದೆ.
ಪ್ರಧಾನಿ ಕಾರ್ಯಾಲಯವು ಪ್ರಧಾನಿ ಮೋದಿ ಅವರ ಪದವಿ ಮತ್ತು ಸ್ನಾತಕೋತ್ತರ ಪ್ರಮಾಣಪತ್ರಗಳನ್ನು ನೀಡಬೇಕಾದ ಅಗತ್ಯವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಆರ್‌ಟಿಐನಡಿ ಈ ಮಾಹಿತಿಯನ್ನು ಸಿಎಂ ಕೇಜ್ರೀವಾಲ್ ಕೇಳಿದ್ದಕ್ಕೆ ದಂಡ ವಿಧಿಸಲಾಗಿದೆ.
ಆರ್‌ಟಿಐನಡಿ ಸಿಎಂ ಅರವಿಂದ ಕೇಜ್ರೀವಾಲ್ ಅರ್ಜಿ ಸಲ್ಲಿಸಿದ್ದ ಮೇರೆಗೆ ಪ್ರಧಾನಿ ಮೋದಿ ಅವರ ಪದವಿ ಮತ್ತು ಸ್ನಾತಕೋತ್ತರ ಪದವಿ ವಿವರಗಳನ್ನು ನೀಡುವಂತೆ ಮಾಹಿತಿ ಆಯೋಗದ ಮುಖ್ಯಸ್ಥರು ಪ್ರಧಾನಿ ಕಾರ್ಯಾಲಯದ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ವಿಶ್ವವಿದ್ಯಾಲಯಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಆದೇಶಿಸಿದ್ದರು. ಸಿಐಸಿ ಆದೇಶವನ್ನು ಪ್ರಶ್ನಿಸಿ ಗುಜರಾತ್ ವಿಶ್ವವಿದ್ಯಾಲಯವು ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿ ಈ ಆದೇಶವನ್ನು ರದ್ದುಗೊಳಿಸಿರುವ ಗುಜರಾತ್‌ನ ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರಿದ್ದ ಪೀಠವು ಕೇಜ್ರೀವಾಲ್ ಅವರಿಗೆ 25 ಸಾವಿರ ದಂಡ ವಿಧಿಸಿದೆ.