ಬಂಟ್ವಾಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡ್ನೂರು ಗ್ರಾಮದ ಎಲ್ಕಾಜೆ ಎಂಬಲ್ಲಿ ಮಾ.31 ರಂದು ಸಂಭವಿಸಿದೆ. ಯಮುನಾ(72) ಎಂಬುವವರೇ ಆತ್ಮಹತ್ಯೆಗೆ ಶರಣಾದವರು. ಇವರು ರಕ್ತದ ಒತ್ತಡ ಮತ್ತು ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು, ಪುತ್ತೂರಿನ ವೈದ್ಯರಲ್ಲಿ ಔಷಧಿ ಮಾಡಿಸಿದರೂ ಗುಣಮುಖವಾಗದೇ ಇದ್ದಾಗ ಜೀವನದಲ್ಲಿ ಜಿಗುಪ್ಸೆಗೊಂಡು ಶುಕ್ರವಾರದಂದು ಮನೆಯ ಅಡುಗೆ ಕೋಣೆಯ ಛಾವಣಿಗೆ ಸೀರೆಯನ್ನು ಕುಣಿಕೆ ಮಾಡಿ ನೇಣು ಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಬಂಟ್ವಾಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ
