ಪುತ್ತೂರು : ಶಾಂತಿಗೋಡು ಶ್ರೀವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವದ ಎ.2 ಹಾಗೂ 3 ರಂದು ವಿವಿಧ ವೈದಿಕ ಕಾರ್ಯಕ್ರ ಮಗಳೊಂದಿಗೆ ನಡೆಯಲಿದೆ.
ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಎ.2 ರಂದು ಬೆಳಿಗ್ಗೆ ಶ್ರೀವಿಷ್ಣುಮೂರ್ತಿ ಭಜನಾ ಮಂದಿರದಿಂದ ಊರ ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಏ.3 ಸೋಮವಾರ ಬೆಳಿಗ್ಗೆ 8.30 ಕ್ಕೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಮಹಾಗಣಪತಿ ಹೋಮ, ಪಂಚವಿಂಶತಿ ಕಲಶ ಪೂಜೆ, ದೈವಗಳ ತಂಬಿಲ, ಮಧ್ಯಾಹ್ನ 12 ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ಜರಗಲಿದೆ. ಸಂಜೆ 5 ಕ್ಕೆ ದೈವಗಳ ಭಂಡಾರ ತೆಗೆಯುವುದು. ರಾತ್ರಿ ಗಂಟೆ 7ಕ್ಕೆ ಮಹಾಪೂಜೆ, 7.30 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಳಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ. 10 ಕ್ಕೆ ಶ್ರೀ ರಕ್ತೇಶ್ವರಿ, ವ್ಯಾಘ್ರಚಾಮುಂಡಿ, ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.