ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ಬರ ದೇವಸ್ಥಾನದಲ್ಲಿ ಏ.10 ರಿಂದ 17 ರ ತನಕ ನಡೆಯುವ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಶನಿವಾರ ನಡೆಯಿತು.
ಬೆಳಿಗ್ಗೆ ಶ್ರೀ ದೇವಸ್ಥಾನದ ಗರ್ಭಗುಡಿ ಎದುರು ಪ್ರಾರ್ಥನೆ ನೆರವೇರಿಸಿದ ಬಳಿಕ ದೇವಸ್ಥಾನದ ಪಕ್ಕದ ತೋಟವೊಂದರಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್.ಭಟ್ ಗೊನೆ ಮುಹೂರ್ತ ನೆರವೇರಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಬಿ.ಐತ್ತಪ್ಪ ನಾಯ್ಕ್, ರಾಮದಾಸ್ ಗೌಡ, ರವೀಂದ್ರನಾಥ ರೈ ಬಳ್ಳಮಜಲು, ಶೇಖರ್ ನಾರಾವಿ, ರಾಮಚಂದ್ರ ಕಾಮತ್, ಡಾ.ಸುಧಾ ಎಸ್.ರಾವ್, ವೀಣಾ ಬಿ.ಕೆ., ಪ್ರಧಾನ ಅರ್ಚಕ ವಸಂತ ಕೆದಿಲಾಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಸಿಬ್ಬಂದಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.