ಪುತ್ತೂರು : ವಾಕ್ಚಾತುರ್ಯ ಚಾತುರ್ಯತೆ ಎಂಬುದು ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಬಹುಮುಖ್ಯ ಅಂಶದ ಜತೆ ಮಾತಿನಲ್ಲಿ ಸ್ಪಷ್ಪತೆ ಇರಬೇಕು. ಅದರೊಂದಿಗೆ ವಿದ್ಯಾರ್ಥಿಗಳು ಪ್ರಾಯೋಗಿಕ ಕಲಿಕೆಯಲ್ಲೂ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಉಪನ್ಯಾಸಕಿ ಹೇಮ ಸುಭಾಷಿಣಿ ಹೇಳಿದರು.
ಅವರು ವಿವೇಕಾನಂದ ಮಹಾವಿದ್ಯಾಲಯ ಕಲಾ, ವಿಜ್ಞಾನ, ವಾಣಿಜ್ಯ (ಸ್ವಾಯತ್ತ)ದ ಐಕ್ಯೂಎಸಿ ಘಟಕ ಹಾಗೂ ಪತ್ರಿಕೋದ್ಯಮ ವಿಭಾಗ ಆಯೋಜಿಸಿದ ಮಣಿಕರ್ಣಿಕ ಮಾತುಗಾರರ ವೇದಿಕೆಯಲ್ಲಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿ. ಗಣಪತಿ ಭಟ್ ಮಾತನಾಡಿ, ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆಯು ಬಹಳ ಮುಖ್ಯವಾಗಿರುತ್ತದೆ. ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪ್ರಾಯೋಗಿಕ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಅದಕ್ಕೆ ಈ ಪತ್ರಿಕೆ ತುಂಬಾ ಸಹಕಾರಿಯಾಗಲಿ ಎಂದರು.
ವೇದಿಕೆಯಲ್ಲಿ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಹವ್ಯಶ್ರೀ ಪಾಲ್ತಾಡಿ, ಮಣಿಕರ್ಣಿಕ ಕಾರ್ಯಕ್ರಮದ ಜೊತೆ ಕಾರ್ಯದರ್ಶಿ ಮಂಜುನಾಥ್ ಜೋಡುಕಲ್ಲು ಉಪಸ್ಥಿತರಿದ್ದರು. ತೃತೀಯ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಾದ ಅರಹಂತ್ ಜೈನ್ ಸ್ವಾಗತಿಸಿ, ನಮನ್ ಶೆಟ್ಟಿ ವಂದಿಸಿದರು. ಕೃತಿ ಬಲ್ಯಾಯ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಪ್ರಥಮ ಪತ್ರಿಕೋದ್ಯಮ ವಿದ್ಯಾರ್ಥಿಗಳು ರೂಪಿಸಿದ ಪ್ರಾಯೋಗಿಕ ಇ-ಪತ್ರಿಕ “ವಿವೇಕ ವಿಚಾರ” ವನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ವಿ. ಗಣಪತಿ ಭಟ್ ಬಿಡುಗಡೆಗೊಳಿಸಿದರು.