ಹುಬ್ಬಳ್ಳಿ : ಹುಬ್ಬಳ್ಳಿಯ ಬಂಡಿಗೆರೆಯಲ್ಲಿ 5 ರೂಪಾಯಿ ಕೇಳಿದ್ದಕ್ಕೆ ವ್ಯಕ್ತಿಯೋರ್ವ ಎಂಟು ವರ್ಷದ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆಗೈದ ಘಟನೆ ಏ. 2 ರಂದು ನಡೆದಿದೆ.
ಮಾ. 30 ರಂದು ನಡೆದಿದ್ದ ಈ ಭೀಕರ ಕೊಲೆ ಬೇಧಿಸಿದ ಪೊಲೀಸರಿಗೆ ಅಚ್ಚರಿಯಾಗಿದ್ದು, ಎಂಟು ವರ್ಷದ ನದೀಂ ಎನ್ನುವ ಬಾಲಕ ಶಾಲೆ ರಜೆ ಕೊಟ್ಟಿದ್ದರಿಂದ ಬೆಂಡಿಗೇರಿ ಪೊಲೀಸ್ ಠಾಣೆಯ ಹತ್ತಿರವಿರುವ ದೊಡ್ಮನಿ ಕಾಲೋನಿಯಲ್ಲಿನ ಅಜ್ಜಿ ಮನೆಗೆಂದು ಬಂದಿದ್ದ ವೇಳೆ ಸೈಕೋ ಕಿಲ್ಲರ್ ರವಿ ಬಳ್ಳಾರಿ ಎಂಬ ವ್ಯಕ್ತಿ ಕೇವಲ 5 ರೂಪಾಯಿ ಕೇಳಿದ್ದಕ್ಕೆ ಮಗುವನ್ನು ಕೊಲೆ ಮಾಡಿ ಬಳಿಕ ಮಗುವಿನ ಶವವನ್ನು ಮಿರ್ಚಿ ಗ್ರೌಂಡ್ ಕಂಟಿಯಲ್ಲಿ ಎಸೆದು ಹೋಗಿದ್ದ ಎಂದು ತಿಳಿದುಬಂದಿದೆ.
ಎರಡು ದಿನಗಳ ಹಿಂದೆ ಬಾಲಕ ನದೀಂನನ್ನು ಕೊಲೆ ಮಾಡಿ ಪರಾರಿಯಾಗಿದ್ದ ರವಿ ಬಳ್ಳಾರಿಯನ್ನು ಬೆಂಡಿಗೇರಿ ಪೊಲೀಸರು ಇದೀಗ ಬಲೆಗೆ ಬಿದ್ದಿದ್ದು, ಐದು ರೂಪಾಯಿ ಕೇಳಿದ್ದಕ್ಕೆ ಮಗುವನ್ನು ಕೊಲೆ ಮಾಡಿದ್ದೇನೆ ಎಂದು ತನಿಖೆ ವೇಳೆ ಆರೋಪಿ ರವಿ ಬಳ್ಳಾರಿ ಒಪ್ಪಿಕೊಂಡಿದ್ದಾನೆ.
ಇನ್ನು ನದೀಂಗೆ ರವಿ ಬಳ್ಳಾರಿ ಮೊದಲೆ ಗೊತ್ತಿದ್ದನಂತೆ ಅದೇ ಕಾರಣಕ್ಕೆ ಬಾಲಕ ರವಿ ಬಳಿ ಐದು ರೂಪಾಯಿ ಕೇಳಿರುತ್ತಾನೆ. ಐದು ರೂಪಾಯಿ ಕೊಟ್ಟ ಬಳಿಕ ಮತ್ತೆ ಐದು ರೂಪಾಯಿ ಕೇಳಿದ್ದಕ್ಕೆ ಮಗುವನ್ನು ಕೊಲೆ ಮಾಡಿದ್ದೇನೆ ಎಂದು ರವಿ ಪೊಲೀಸರ ತನಿಖೆ ವೇಳೆ ಒಪ್ಪಿಕೊಂಡಿದ್ದಾನೆ.