ಶೈಕ್ಷಣಿಕ ಅವಧಿ ಮೇ 29ರಿಂದ ಆರಂಭ | ಶಿಕ್ಷಣ ಇಲಾಖೆ ಆಯುಕ್ತರ ಸೂಚನೆ | 2023-24ನೇ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿ ಪ್ರಕಟ

ಪುತ್ತೂರು: 2023-24ನೇ ಸಾಲಿನ ಶೈಕ್ಷಣಿಕ ಅವಧಿ ಮೇ.29 ರಿಂದ ಆರಂಭವಾಗಲಿದೆ. ಈ ಕುರಿತು ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.

ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸುವಂತೆ ಆಯುಕ್ತರು ಸೂಚನೆ ನೀಡಿದ್ದು, ರಾಜ್ಯಾದ್ಯಂತ 2023-24ನೇ ಸಾಲಿನ ಶೈಕ್ಷಣಿಕ ಚಟುವಟಕೆಗಳು ಮಾ.29 ರಿಂದ ಆರಂಭಗೊಳ್ಳುತ್ತಿದ್ದು, ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ.

2023-24ನೇ ಮೊದಲ ಶೈಕ್ಷಣಿಕ ಅವಧಿ ಮೇ. 29ರಿಂದ ಅಕ್ಟೋಬರ್ 7 ರ ತನಕ, ಎರಡನೇ ಅವಧಿ ಅ.25 ರಿಂದ ಏ.10, 2024 ಕ್ಕೆ ಮುಕ್ತಾಯವಾಗಲಿದೆ. ಮಧ್ಯಮಂತರ ರಜೆ 2023 ರ ಅಕ್ಟೋಬರ್ 8 ರಿಂದ ಅ.24ರ ವರೆಗೆ ಇರಲಿದೆ. ಬೇಸಿಗೆ ರಜೆ ಏ.11 ರಿಂದ ಮೇ. 28 ರ ತನಕ ನೀಡಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top