ದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ರೋಸ್ ಅವೆನ್ಯೂ ಕೋರ್ಟ್ ಏ. 17 ರವರೆಗೆ ವಿಸ್ತರಿಸಿದೆ.
ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ಎಎಪಿ ನಾಯಕನ ನ್ಯಾಯಾಂಗ ಬಂಧನ ವಿಸ್ತರಿಸುವಂತೆ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ತನಿಖೆಯು “ನಿರ್ಣಾಯಕ ಹಂತದಲ್ಲಿದೆ” ಎಂದು ಹೇಳಿದೆ. ಕೋರ್ಟ್ ಸಿಬಿಐ ಮನವಿಯನ್ನು ಪುರಸ್ಕರಿಸಿ ಏ. 7ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದೆ.
ಈಗ ರದ್ದಾಗಿರುವ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಸಿಸೋಡಿಯಾ ಅವರನ್ನು ಫೆಬ್ರವರಿ 26 ರಂದು ಬಂಧಿಸಿದ್ದು, ಆಪ್ ನಾಯಕನಿಗೆ ದೆಹಲಿ ನ್ಯಾಯಾಲಯ ಶುಕ್ರವಾರ ಜಾಮೀನು ನಿರಾಕರಿಸಿದೆ.