ಟ್ವಿಟ್ಟರ್ ಲೋಗೋವನ್ನು ನೀಲಿ ಹಕ್ಕಿಯಿಂದ ನಾಯಿಗೆ ಬದಲಿಸಿದ ಎಲಾನ್ ಮಸ್ಕ್

ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್ ನಿತ್ಯ ಒಂದಲ್ಲಾ ಒಂದು ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಇದೀಗ ಟ್ವಿಟ್ಟರ್ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರವನ್ನು ಹಾಕಿದ್ದು ಕುತೂಹಲ ಮೂಡಿಸಿದೆ.
ಹಕ್ಕಿಯ ಜಾಗಕ್ಕೆ ಕ್ರಿಪ್ಟೋಕರೆನ್ಸಿ ಡಾಗ್​ಕಾಯಿನ್​ನ ನಾಯಿಯ ಮೀಮ್ಸ್ ಫೋಟೋವನ್ನು ಬಳಸಿದ್ದಾರೆ. ಮಸ್ಕ್​ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಆದರೆ ಇಲ್ಲೊಂದು ಟ್ವಿಸ್ಟ್​ ಇದೆ. ಟ್ವಿಟ್ಟರ್ ಬದಲಾವಣೆ ಕೇವಲ ವೆಬ್​ ಆವೃತ್ತಿಗೆ ಮಾತ್ರ ಸೀಮಿತವಾಗಿದೆ, ಮೊಬೈಲ್​ನಲ್ಲಿ ಪಕ್ಷಿಯ ಲೋಗೋ ಕಾಣಿಸಲಿದೆ.

ಬಿಟ್​ ಕಾಯಿನ್​ನಂತಹ ಇತರೆ ಕ್ರಿಪ್ಟೋ ಕರೆನ್ಸಿಯನ್ನು ಅಪಹಾಸ್ಯ ಮಾಡಲು 2013ರಲ್ಲಿ ತಮಾಷೆಗಾಗಿ ಈ ನಾಯಿ ಚಿತ್ರ ರಚಿಸಲಾಗಿತ್ತು. 2022ರ ಏಪ್ರಿಲ್​ನಲ್ಲಿ ಟ್ವಿಟ್ಟರ್ ಖರೀದಿಸುವ 22 ಬಿಲಿಯನ್ ಡಾಲರ್ ಒಪ್ಪಂದವನ್ನು ಮಸ್ಕ್ ಆರಂಭಿಸಿದ್ದರು. ಅವರು ಸ್ಪ್ಯಾಮ್ ಖಾತೆಗಳನ್ನು ತೆಗೆದುಹಾಕಲು ಯೋಜಿಸಿದ್ದರು.
ಸ್ವಯಂ ಘೋಷಿತ ಲೋಗೋ ನಿರ್ಧಾರವನ್ನು ಟ್ವಿಟರ್‌ ಮಾಲೀಕ ಎಲೋನ್ ಮಸ್ಕ್ ಖಚಿತ ಪಡಿಸಿದ್ದಾರೆ. ಇದಲ್ಲದೆ ಎಲೋನ್ ಮಸ್ಕ್ ಅವರ ಈ ಹೊಸ ನಿರ್ಧಾರವು ಉತ್ತಮ ಬದಲಾವಣೆಗೆ ಕಾರಣವಾಗಿದೆ. ಏಕೆಂದರೆ ಲೋಗೋವನ್ನು ಡೋಜ್ ಮೆಮೆಗೆ ಬದಲಾಯಿಸಿದ ಸ್ವಲ್ಪ ಸಮಯದ ನಂತರ, ಕ್ರಿಪ್ಟೋಕರೆನ್ಸಿಯ ಮೌಲ್ಯವು 30 ಪ್ರತಿಶತದಷ್ಟು ಸೇರ್ಪಡೆಯಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top