ಪುತ್ತೂರು: ಶಾಂತಿಗೋಡು ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏ. 3ರಂದು ಪ್ರತಿಷ್ಠಾ ಮಹೋತ್ಸವ, ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ ನಡೆಯಿತು.
ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿದವು.



ಏ. 2ರಂದು ಬೆಳಿಗ್ಗೆ ಶ್ರೀ ವಿಷ್ಣುಮೂರ್ತಿ ಭಜನ ಮಂದಿರದಿಂದ ದೇವಸ್ಥಾನದವರೆಗೆ ಹೊರೆಕಾಣಿಕೆ ಮೆರವಣಿಗೆ ಜರಗಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ಏ. 3ರಂದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ದೈವಗಳ ಭಂಡಾರ ತೆಗೆದು, ರಾತ್ರಿ ಶ್ರೀ ವಿಷ್ಣುಮೂರ್ತಿ ದೇವರ ಉತ್ಸವ, ಅಶ್ವತ್ಥ ಕಟ್ಟೆಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು. ಬಳಿಕ ವ್ಯಾಘ್ರ ಚಾಮುಂಡಿ, ರಕ್ತೇಶ್ವರಿ, ಕಲ್ಲುರ್ಟಿ ದೈವಗಳ ನೇಮ ಜರಗಿತು.
























