ಚುಂಬನ ಪ್ರಕರಣದಲ್ಲಿ 16 ವರ್ಷದ ಬಳಿಕ ಶಿಲ್ಪಾ ಶೆಟ್ಟಿ ನಿರ್ದೋಷಿ

2007ರಲ್ಲಿ ರಾಜಸ್ಥಾನದಲ್ಲಿ ನಡೆದ ಘಟನೆ

ಮುಂಬಯಿ : ಸಾರ್ವಜನಿಕ ವೇದಿಕೆಯಲ್ಲಿ ಹಾಲಿವುಡ್‌ ನಟ ರಿಚರ್ಡ್‌ ಗೇರ್‌ ಅವರನ್ನು ಚುಂಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶಿಲ್ಪಾ ಶೆಟ್ಟಿ 16 ವರ್ಷದ ಬಳಿಕ ನಿರ್ದೋಷಿ ಎಂದು ಸಾಬೀತಾಗಿದ್ದಾರೆ.
ಈ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ನಿರ್ದೋಷಿ ಎಂದು ಹೇಳಿ ಖುಲಾಸೆಗೊಳಿಸಿದ್ದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ತೀರ್ಪನ್ನು ಮುಂಬಯಿಯ ಸೆಷನ್ಸ್‌ ಕೋರ್ಟ್‌ ಎತ್ತಿ ಹಿಡಿದಿದೆ.
2007ರಲ್ಲಿ ರಾಜಸ್ಥಾನದಲ್ಲಿ ಏಡ್ಸ್‌ ಜಾಗೃತಿ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ನಟ ರಿವರ್ಡ್‌ ಗೇರ್‌ ಅವರು ಶಿಲ್ಪಾ ಶೆಟ್ಟಿಯನ್ನು ಬರಸೆಳೆದು ಅಪ್ಪಿ ಹಿಡಿದು ಚುಂಬಿಸಿದ್ದರು. ಸಾವಿರಾರು ಜನರ ಎದುರು ನಟ ಮತ್ತು ನಟಿ ತೋರಿಸಿದ ಈ ವರ್ತನೆ ಬಗ್ಗೆ ಭಾರಿ ವಿರೋಧ ವ್ಯಕ್ತವಾಗಿ ಭಾರತೀಯ ಸಂಸ್ಕೃತಿಗೆ ಅಪಚಾರ ಎಸಗುವ ವರ್ತನೆ ವಿರುದ್ಧ ಕೇಸು ದಾಖಲಾಗಿತ್ತು. ಸುದೀರ್ಘ 15 ವರ್ಷ ವಿಚಾರಣೆ ನಡೆದು ಕಳೆದ ವರ್ಷ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಶಿಲ್ಪಾ ಶೆಟ್ಟಿಯನ್ನು ನಿರ್ದೋಷಿ ಎಂದು ಹೇಳಿತ್ತು. ಈ ತೀರ್ಪಿನ ವಿರುದ್ಧ ಸೆಷನ್ಸ್‌ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಇದೀಗ ಸೆಷನ್ಸ್‌ ಕೋರ್ಟ್‌ ತೀರ್ಪನ್ನು ಎತ್ತಿ ಹಿಡಿದಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top