ಪುತ್ತೂರು: ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪುರಸ್ಕಾರ
ಕಾರ್ಯಕ್ರ ಮ ಮಂಗಳೂರಿನ ಲೊಯಲ್ಲಾ ಹಾಲ್,ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ॥ ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಒಡಿಯೂರು ಸಂಸ್ಥಾನದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ, ವಿಗಾರ್ ಜನರಲ್, ಮಂಗಳೂರು ಧರ್ಮ ಪ್ರಾಂತ್ಯದ ಅತಿಪಂದನೀಯ ಮ್ಯಾಕ್ಸಿಮ್ ನೊರೋನ್ಹಾ, ಮುಸ್ಲಿಂ ಧರ್ಮಗುರು ಮೌಲಾನ ಯು.ಕೆ. ಅಬ್ದುಲ್ ಅಜೀಜ್ ಧಾರಿಮೀ, ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪುರಸ್ಕೃತರು Hony Nb ಸುಬೇದಾರ್ ಏಕನಾಥ ಶೆಟ್ಟಿ ಅವರ ಧರ್ಮಪತ್ನಿ, ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ, ಸರ್ವ ಸಮಾಜದ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.