ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಸಾರಡ್ಕ ಚೆಕ್ ಪೋಸ್ಟ್ ನಲ್ಲಿ ನೀತಿ ಸಂಹಿತೆ ಜ್ಯಾರಿಯಲ್ಲಿರುವ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಲಾಯಿತು.

ಜಿಲ್ಲೆಯ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಾಗಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಅವರು ಗುರುವಾರ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಗಳು ಉಪಸ್ಥಿತರಿದ್ದರು.