ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿ ಮತ್ತು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಏ. 7 ರಂದು ಎಫ್‌ಐಆರ್ ದಾಖಲಿಸಲಾಗಿದೆ. ನೀತಿ ಸಂಹಿತೆ ಉಲ್ಲಂಘಿಸಿ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ಆರೋಪದಲ್ಲಿ ಚುನಾವಣಾಧಿಕಾರಿ ದೂರು ಸಲ್ಲಿಸಿದ್ದು ಐಪಿಸಿಯ ಸೆಕ್ಷನ್ 171 E ಮತ್ತು 171 I ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ನೀತಿ ಸಂಹಿತೆ ಜಾರಿಯಾದ ಬಳಿಕ ಅನುಮತಿ ಪಡೆಯದೆ ಈ ಸಭೆ ಆಯೋಜನೆ ಮಾಡಲಾಗಿತ್ತು. ಮಾತ್ರವಲ್ಲ ಆಯೋಜಕರು ಕಾರ್ಯಕರ್ತರಿಗೆ ಊಟದ ವ್ಯವಸ್ಥೆ ಕೂಡ ಮಾಡಿದ್ದರು. ಏ.​ 2 ರಂದು ಬೆಂಗಳೂರಿನ ಗುರುರಾಜ್​ ಕಲ್ಯಾಣ ಮಂಟಪದಲ್ಲಿ ಕ್ಷೇತ್ರದ ಕಾರ್ಯಕರ್ತರ ಜೊತೆ ಸಭೆಯಲ್ಲಿ ಶಾಸಕ ರೇಣುಕಾಚಾರ್ಯ ಮೈಕ್​ ಹಿಡಿದು ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಚುನಾವಣಾಧಿಕಾರಿಗಳು ಸಂಪೂರ್ಣ ಸಭೆಯ ವಿಡಿಯೋ ಮಾಡಿಕೊಂಡು, ಬಳಿಕ ಮೈಕ್​ ಕಸಿದುಕೊಂಡು ಕಾರ್ಯಕ್ರಮವನ್ನು ರದ್ದುಗೊಳಿಸಿದ್ದರು. ಈ ಪ್ರಕರಣ ಸಂಬಂಧ ಬೆಂಗಳೂರಿನ ಹೈಗ್ರೌಂಡ್​ ಪೊಲೀಸ್​ ಠಾಣೆಯಲ್ಲಿ ಚುನಾವಣಾಧಿಕಾರಿಗಳು ಎಫ್​ಐಆರ್​ ದಾಖಲಿಸಿದ್ದಾರೆ.

ರೇಣುಕಾಚಾರ್ಯ ಅವರು ತಾವು ಕಾನೂನು ಬಾಹಿರವಾಗಿ ಏನನ್ನೂ ಮಾಡಿಲ್ಲ ಎಂದು ಪೊಲೀಸರಿಗೆ ಮನವರಿಕೆ ಮಾಡಿಕೊಡಲು ಯತ್ನಿಸಿದ್ದು, ಪಕ್ಷದಲ್ಲಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಆಂತರಿಕ ಬಂಡಾಯ ಎದ್ದಿದ್ದು, ತಮ್ಮ ಬೆಂಬಲಿಗರು ಮತ್ತು ಅಲ್ಲಿ ನೆರೆದಿದ್ದವರಿಗೆ ಪೊಲೀಸರ ಬಗ್ಗೆ ಚಿಂತಿಸಬೇಡಿ ಎಂದು ಹೇಳುತ್ತಿದ್ದೆ ಎಂದು ಹೇಳಿದ್ದಾರೆ.







































 
 

ಟಿಕೆಟ್ ಘೋಷಣೆಗೂ ಮುನ್ನವೇ ಪ್ರಚಾರ ಆರಂಭಿಸಿದ ರೇಣುಕಾಚಾರ್ಯ

ಹೊನ್ನಾಳಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಟಿಕೆಟ್ ಘೋಷಣೆಗೂ ಮುನ್ನವೇ ಪ್ರಚಾರ ಆರಂಭಿಸಿದ ಶಾಸಕ ರೇಣುಕಾಚಾರ್ಯ. ಹೊನ್ನಾಳಿ ತಾಲೂಕಿನ ತಿಮ್ಲಾ ಪುರ ತಾಂಡದಲ್ಲಿ ರೇಣುಕಾಚಾರ್ಯ ಪ್ರಚಾರ. ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಇದೇ ತಿಂಗಳ 20 ನೇ ತಾರೀಕು ನಾಮಪತ್ರ ಸಲ್ಲಿಸಲು ರೇಣುಕಾಚಾರ್ಯ ನಿರ್ಧಾರ. ತಿಮ್ಲಾಪುರ ತಾಂಡಕ್ಕೆ ಭೇಟಿ ನೀಡಿ ಗ್ರಾಮದ ಮುಖಂಡರು, ಕಾರ್ಯಕರ್ತರಿಗೆ ಆಹ್ವಾನ. ತಿಮ್ಲಾಪುರ ತಾಂಡದಲ್ಲಿ ಮತಯಾಚನೆ. ನಿಮ್ಮ ಗ್ರಾಮಕ್ಕೆ ನೀರಾವರಿ ಸೌಕರ್ಯಕ್ಕಾಗಿ 19 ಕೋಟಿ ಬಿಡುಗಡೆ ಮಾಡಿದ್ದೇನೆ. ಸಾಕಷ್ಟು ಅಭಿವೃದ್ಧಿ ‌ಮಾಡಿದ್ದೇನೆಂದು ಮತಯಾಚನೆ.

ಏಪ್ರಿಲ್‌ 13 ರಂದು ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ. ಅಲ್ಲದೆ, ನಾಮಪತ್ರ ಸಲ್ಲಿಕೆ ಆರಂಭವೂ ಏಪ್ರಿಲ್‌ 13 ರಂದೇ ಆರಂಭವಾಗಲಿದೆ. ಇನ್ನು, ಏಪ್ರಿಲ್‌ 20 ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಏಪ್ರಿಲ್‌ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್‌ 24 ಆಗಿದೆ.  ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top