ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಜ್ಞಾನ ವೇದಿಕೆ ಕಾರ್ಯಕ್ರಮಗಳ ಉದ್ಘಾಟನೆ, ಅತಿಥಿ ಉಪನ್ಯಾಸ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವಿಜ್ಞಾನ ವೇದಿಕೆ ಆಶ್ರಯದಲ್ಲಿ ವಿಜ್ಞಾನ ವೇದಿಕ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಪುತ್ತೂರಿನ ದಂತ ವೈದ್ಯ ಡಾ| ಎಲ್‌. ಕೃಷ್ಣಪ್ರಸಾದ್‌ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲ ವಂ|ಡಾ| ಆಂಟನಿ ಪ್ರಕಾಶ್‌ ಮೊಂತೆರೊ ಅಧ್ಯಕ್ಷತೆ ವಹಿಸಿ ಮಾತನಾಡಿ, ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.







































 
 

ಕ್ಯಾಂಪಸ್‌ ನಿರ್ದೇಶಕ ವಂ| ಸ್ಟ್ಯಾನಿ ಪಿಂಟೋ ಶುಭ ಹಾರೈಸಿದರು. ಬಳಿಕ ಡಾ.ಎಲ್‌ ಕೃಷ್ಣಪ್ರಸಾದ್‌ʼದಂತ ವೈದ್ಯಕೀಯ ಮತ್ತು ರಸಾಯನ ಶಾಸ್ತ್ರ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

ತನ್ವಿ ಮತ್ತು ಬಳಗದವರು ಪ್ರಾರ್ಥಿಸಿದರು. ವಿಜ್ಞಾನ ವೇದಿಕ ಅಧ್ಯಕ್ಷೆ ರಕ್ಷಾಅಂಚನ್‌ ಸ್ವಾಗತಿಸಿದರು. ನಿರ್ದೇಶಕ ಡಾ| ಪಿ.ಎಸ್‌.ಕೃಷ್ಣಕುಮಾರ್‌ ಅತಿಥಿಗಳನ್ನು ಪರಿಚಯಿಸಿದರು. ಉಪಾಧ್ಯಕ್ಷ ಪ್ರಕೃತಿ ಅಶೋಕ್‌ ವಂದಿಸಿದರು. ವಿದ್ಯಾರ್ಥಿನಿ ಸೌಜನ್ಯ ಕಾರ್ಯಕ್ರಮ ನಿರೂಪಿಸಿದರು.

ವೇದಿಕೆಯಲ್ಲಿ ವಿಜ್ಞಾನ ವಿಭಾಗದ ಡೀನ್‌ ಹಾಗೂ ಕಾಲೇಜಿನ ಉಪ-ಪ್ರಾಂಶುಪಾಲ ಪ್ರೊ| ಗಣೇಶ್‌ ಭಟ್‌, ವಿಜ್ಞಾನ ವೇದಿಕೆಯ ವಿದ್ಯಾರ್ಥಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿಜ್ಞಾನ ದಿನಾಚರಣೆ ಅಂಗವಾಗಿ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top