ಪ್ರಚೋದನಕಾರಿ ಭಾಷಣದ ಆರೋಪ ಜೆಡಿಎಸ್ ನಟಿ ಶ್ರುತಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು : ನಟಿ, ಬಿಜೆಪಿ ನಾಯಕಿ ಶ್ರುತಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಜೆಡಿಎಸ್ ಆರೋಪಿಸಿ​​​ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಗುರುವಾರ (ಏ.6) ರಂದು ಹಿರೇಕೆರೂರು ಕ್ಷೇತ್ರದಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ನಟಿ ಶ್ರುತಿ ಭಾಷಣದ ಭರಾಟೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಜೆಡಿಎಸ್​ ಆರೋಪ ಮಾಡಿದೆ.

ನಿಮ್ಮ ವಂಶ ಬಿಟ್ಟು, ಬೇರೆ ವಂಶ ಬೆಳೆಯಬೇಕು ಎಂದರೆ ಜೆಡಿಎಸ್​​ಗೆ ಮತ ಹಾಕಿ. ನಿಮ್ಮ ವಂಶ ಬಿಟ್ಟು ಬೇರೆ ದೇಶದ ವಂಶ ಬೆಳೆಯಬೇಕು ಎಂದರೆ ಕಾಂಗ್ರೆಸ್​ಗೆ ಮತ ನೀಡಿ. ದೇಶದ ವಂಶ ಬೆಳೆಯಬೇಕು ಎಂದರೆ ಭಾರತೀಯ ಜನತಾ ಪಾರ್ಟಿಗೆ ಮತ ನೀಡಿ ಎಂದು ನಟಿ ಶೃತಿ ಹೇಳಿದ್ದರು.

ಇದಕ್ಕೆ ಜೆಡಿಎಸ್​, ನಟಿ ಶೃತಿಯವರು ಪ್ರಚೋದನಕಾರಿ ಭಾಷಣ ಮಾಡಿ ಮತದಾರರನ್ನು ಒಲಿಸಿಕೊಳ್ಳುವ ಯತ್ನ ಮಾಡಿದ್ದಾರೆ. ಈ ಹಿನ್ನೆಲೆ ಅವರ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು​ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top