ಬೆಂಗಳೂರು : ಅಖಿಲ ಭಾರತ ಕಾಂಗ್ರೆಸ್ ಸಮಿತಿಯು (ಎಐಸಿಸಿ), ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಕಾರ್ಯಾಧ್ಯಕ್ಷರನ್ನಾಗಿ ಬಿ.ಎನ್. ಚಂದ್ರಪ್ಪ ಅವರನ್ನು ನೇಮಕ ಮಾಡಿದೆ. ಈ ಸ್ಥಾನದಲ್ಲಿದ್ದ ಮಾಜಿ ಸಂಸದ ಆರ್. ಧ್ರುವನಾರಾಯಣ ಅವರು ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದರು. ಕಾಂಗ್ರೆಸ್ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಚಂದ್ರಪ್ಪ ಅವರನ್ನು ನೇಮಕ ಮಾಡಿದ್ದು, ಈ ಆದೇಶವು ಇಂದಿನಿಂದಲೇ ಜಾರಿಗೆ ಬರಲಿದೆ ಎಂದು ಎಐಸಿಸಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬಿ.ಎನ್. ಚಂದ್ರಪ್ಪ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕ
