ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಆರಂಭಗೊಂಡಿದ್ದು, ಉತ್ಸವದ ಅಂಗವಾಗಿ ಸೋಮವಾರ ಸಂಜೆ ಶ್ರೀ ದೇವರ ಬಲಿ ಉತ್ಸವ ನಡೆಯಿತು.
ಬಳಿಕ ದೇವಸ್ಥಾನದ ವಠಾರದಲ್ಲಿರುವ ಕಟ್ಟೆಯಲ್ಲಿ ಪೂಜೆ ನಡೆಯಿತು. ಭಕ್ತಾದಿಗಳು ಸೇವಾ ಪೂಜೆ ಮಾಡಿಸಿ ಪ್ರಸಾದ ಸ್ವೀಕರಿಸಿದರು.
ಬಳಿಕ ಶ್ರೀ ದೇವರು ಬೊಳುವಾರು, ಶ್ರೀರಾಮ ಪೇಟೆ, ಕಾರ್ಜಾಲು, ರಕ್ತೇಶ್ವರ ನಗರ, ಕಲ್ಲೇಗ ಪೇಟೆ ಸವಾರಿಗೆ ತೆರಳಿದರು.