ಪುತ್ತೂರು: ನೆಕ್ಕಿಲಾಡಿ ಶಕ್ತಿ ಕೇಂದ್ರದಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆಯನ್ನು ಮಂಗಳವಾರ ಆಚರಿಸಲಾಯಿತು.
ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ, ಹಿರಿಯರಾದ ಅಪ್ಪಯ್ಯ ಮಣಿಯಾಣಿ, ಜಿಲ್ಲಾ ಸಹಕಾರಿ ಪ್ರಕೋಷ್ಟದ ಸಹಸಂಚಾಲಕ ಕೆ.ವಿ. ಪ್ರಸಾದ್, ಮಂಡಲ ಓಬಿಸಿ ಮೋರ್ಚಾದ ಅಧ್ಯಕ್ಷ ಸುನಿಲ್ ದಡ್ಡು, ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಸುರೇಶ್ ಅತ್ರಮಜಲ್, ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪುನೀತ್ ಮಾಡತ್ತಾರ್, ಶಕ್ತಿ ಕೇಂದ್ರ ಸಂಚಾಲಕ ಸದಾನಂದ, ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಮೊದಲಾದವರು ಉಪಸ್ಥಿತರಿದ್ದರು.
ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಕಾರ್ಯಕ್ರಮ ಆರಂಭಿಸಲಾಯಿತು.