ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವೃತ್ತಿ ಮಾರ್ಗದರ್ಶನ ಹಾಗೂ ನೇಮಕಾತಿ ಕೋಶ ಮತ್ತು ಆಂತರಿಕ ಗುಣಮಟ್ಟ ಭರವಸೆಕೋಶಗಳ ಸಂಯುಕ್ತ ಆಶ್ರಯದಲ್ಲಿ ಯುನೈಟೆಡ್ ಸ್ಟೇಟ್ಸ್ ಮೂಲದ ಬಹುರಾಷ್ಟ್ರೀಯ ಹೆಲ್ತ್ ಕೇರ್ ಮತ್ತು ಇನ್ಶೂರೆನ್ಸ್ ಕಂಪನಿ ಓಪ್ಟಮ್ನ ಮೆಡಿಕಲ್ ಕೋಡರ್ ಹುದ್ದೆಗಳಿಗಾಗಿ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ ಕಾಲೇಜಿನಲ್ಲಿ ಆಯೋಜಿಸಲಾಯಿತು.
ಲಿಖಿತ ಪರೀಕ್ಷೆ ನಡೆಸುವ ಮೊದಲು ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ಜು ಕಾಲೇಜಿನ ಪ್ರಾಂಶುಪಾಲ ವಂ ಡಾ| ಆಂಟೊನಿ ಪ್ರಕಾಶ್ ಮೊಂತೆರೊ ವಹಿಸಿ ಮಾತನಾಡಿ, ನೇಮಕಾತಿ ಕಾರ್ಯಕ್ರಮಗಳು ಅಭ್ಯರ್ಥಿಗಳಿಗೆ ತಮ್ಮ ಕೌಶಲ್ಯಗಳನ್ನು ಅರಿತುಕೊಳ್ಳಲು ಸಹಕಾರಿಯಾಗುತ್ತವೆ. ನಾವು ಕಲಿತ ವಿಷಯಗಳ ಕುರಿತು ಆಳವಾದ ಜ್ಞಾನ ಹೊಂದಿದ್ದರೆ ಮಾತ್ರ ಸಾಲದು . ಅದನ್ನು ಇನ್ನೊಬ್ಬರಿಗೆ ಮನಮುಟ್ಟುವ ರೀತಿಯಲ್ಲಿ ವಿವರಿಸಲು ಸಹನಾವುಶಕ್ತರಾಗಿರಬೇಕು. ನೇಮಕಗೊಳಿಸಿದ ಸಂಸ್ಥೆಗೆ ಅತ್ಯುತ್ತಮ ಸೇವೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ ಎಂದರು. ಕಾಲೇಜಿನ ಮಾರ್ಗದರ್ಶನ ಹಾಗೂ ನೇಮಕಾತಿ ಕೋಶದ ಸಂಯೋಜಕ ಡಾ| ರಾಧಾಕೃಷ್ಣ ಗೌಡ ಸ್ವಾಗತಿಸಿದರು. ಉಪನ್ಯಾಸಕರಾದ ಜೋನ್ಸ್ಸನ್ ಡೇವಿಡ್ ಸಿಕ್ವೆರಾ ವಂದಿಸಿ, ಗೀತಾಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.
ಓಪ್ಟಮ್ ಕಂಪನಿಯ ಟ್ಯಾಲೆಂಟ್ ಅಕ್ವಿಸಿಶನ್ ತಂಡದ ಮುಖ್ಯಸ್ಥರಾದ ಕ್ಲೆಮೆಂಟ್ ಜೋಯಲ್ ಸಿಕ್ವೇರಾ ಹಾಗೂ ಮೆಡಿಕಲ್ ಕೋಡಿಂಗ್ ವಿಭಾಗದ ಮುಖ್ಯಸ್ಥರಾದ ಸುದೀಪ್ತೋಕುಮಾರ್ ದಾಸ್ ನೇಮಕಾತಿ ಪ್ರಕ್ರಿಯೆ ನಡೆಸಿಕೊಟ್ಟರು.