ಬಿಜೆಪಿ 2ನೇ ಪಟ್ಟಿ ಇಂದೇ ರಿಲೀಸ್: ಬಿ.ಎಸ್.ವೈ.

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ 189 ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಜೆಪಿ ಬಿಡುಗಡೆ ಮಾಡಿದ್ದು, 2ನೇ ಪಟ್ಟಿಯನ್ನು ಬುಧವಾರ ರಾತ್ರಿಯೇ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಬಿಜೆಪಿ 125ರಿಂದ 130 ಕ್ಷೇತ್ರಗಳಲ್ಲಿ ಗೆಲುವು ಪಡೆದುಕೊಳ್ಳಲಿದ್ದು, ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೇರಲಿದೆ ಎಂದು ತಿಳಿಸಿದರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಪಕ್ಷ ಟಿಕೇಟ್ ನೀಡುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಬಿ.ಎಸ್.ವೈ., ಟಿಕೇಟ್ ಹಂಚಿಕೆಯಲ್ಲಿ 2-3 ಕಡೆ ಗೊಂದಲ ಇದೆಯಷ್ಟೇ. ಉತ್ತಮ ಅಭ್ಯರ್ಥಿಗಳನ್ನೇ ಪಕ್ಷ ಆಯ್ಕೆ ಮಾಡಿಕೊಂಡಿದೆ. ಆದ್ದರಿಂದ ಆ ಎಲ್ಲಾ ಅಭ್ಯರ್ಥಿಗಳು ಜಯ ಸಾಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top