ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭ

ಬೆಂಗಳೂರು : ವಿಧಾನಸಭೆಯ 224 ಕ್ಷೇತ್ರಗಳಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಇಂದಿನಿಂದ(ಏಪ್ರಿಲ್ 13) ಆರಂಭವಾಗಲಿದೆ. ಏ.20ರ ವರೆಗೆ ನಾಮಪತ್ರ ಸಲ್ಲಿಸಸಲು ಅವಕಾಶವಿದೆ. ಏ.14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಮತ್ತು 16ರಂದು ಭಾನುವಾರ ರಜಾ ದಿನವಾಗಿದ್ದು, ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಹೀಗಾಗಿ ನಾಮಪತ್ರ ಸಲ್ಲಿಕೆಗೆ ಏಳು ದಿನಗಳಲ್ಲಿ ಎರಡು ದಿನ ಸರ್ಕಾರಿ ರಜೆ ಇರಲಿದ್ದು, ಐದು ದಿನಗಳು ಮಾತ್ರ ನಾಮಪತ್ರ ಸಲ್ಲಿಕೆಗೆ ಕಾಲಾವಕಾಶ ಇದೆ. ಇದೇ ಮೊದಲ ಬಾರಿಗೆ ಆನ್‌ಲೈನ್​ ಮೂಲಕ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಚುನಾವಣೆ ಆಯೋಗದ ವೆಬ್​ಸೈಟ್​ನಲ್ಲಿ ಎಲ್ಲ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ.

ನಾಮಪತ್ರ ಸಲ್ಲಿಸುವುದು ಕೂಡ ಅಭ್ಯರ್ಥಿಗಳ ಬಲ ಪ್ರದರ್ಶನದ ವೇದಿಕೆಯಾಗಿದ್ದು, ಇದಕ್ಕಾಗಿ ಭರ್ಜರಿ ತಯಾರಿ ನಡೆಲಾಗುತ್ತದೆ. ಹತ್ತಾರು ವಾಹನಗಳಲ್ಲಿ, ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿ ಬಲ ಪ್ರದರ್ಶನ ಮಾಡುವುದು ಈಗಿನ ಶೈಲಿ. ಹೀಗಾಗಿ ಆನ್‌ಲೈನ್‌ ಔಯವಸ್ಥೆಯನ್ನು ಅಭ್ಯರ್ಥಿಗಳು ಆಯದುಕೊಳ್ಳುವುದು ಕಷ್ಟ.
ಕಾಂಗ್ರೆಸ್‌ 166 , ಬಿಜೆಪಿ 212 ಹಾಗೂ ಜೆಡಿಎಸ್‌ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ‘ಬಿ’ ಫಾರಂ ವಿತರಣೆ ಆರಂಭಿಸಿವೆ. ಆದರೆ, ಎಲ್ಲ ಪಕ್ಷಗಳಿಗೂ ಬಂಡಾಯದ ಬಿಸಿ ತಟ್ಟಲಾರಂಭಿಸಿದೆ. ಇದರ ಮಧ್ಯೆ ಟಿಕೆಟ್‌ ಖಾತರಿಯಾಗಿರುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಶುಭ ದಿನ ಮತ್ತು ಶುಭ ಮಹೂರ್ತ ನಿಗದಿ ಮಾಡಿಕೊಳ್ಳುತ್ತಿದ್ದಾರೆ.

ಬೆಳಗ್ಗೆ 11ರಿಂದ ಮಧ್ಯಾಹ್ನ 3ರೊಳಗೆ ಸಲ್ಲಿಕೆ































 
 

ನಾಮಪತ್ರಗಳನ್ನು ಸಲ್ಲಿಸಲು ಸಮಯ ನಿಗದಿಪಡಿಸಲಾಗಿದ್ದು, ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಬಹುದಾಗಿದೆ. ಚುನಾವಣಾಧಿಕಾರಿಗಳ ಅನುಮತಿ ಪಡೆದುಕೊಂಡು ದೊಡ್ಡ ಮಟ್ಟದಲ್ಲಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆಗೆ ಆಗಮಿಸಬಹುದು. ಆದ್ರೆ, ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿ ಸೇರಿದಂತೆ ಒಟ್ಟು 5 ಜನರಿಗೆ ಮಾತ್ರ ಚುನಾವಣಾಧಿಕಾರಿಗಳ ಕಚೇರಿ ಪ್ರವೇಶಿಸಲು ಅವಕಾಶವಿದ್ದು, 100 ಮೀಟರ್ ವ್ಯಾಪ್ತಿಯಲ್ಲಿ 3 ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶವಿರುತ್ತದೆ.
ಅಭ್ಯರ್ಥಿಗಳಿಗೆ ಆಯೋಗ ವೆಚ್ಚದ ಮಿತಿಯನ್ನು ನಿಗದಿಗೊಳಿಸಿದ್ದು, ಪ್ರತಿ ಅಭ್ಯರ್ಥಿಗೆ 40 ಲಕ್ಷ ರೂ.ವರೆಗೆ ಖರ್ಚು ಮಾಡಬಹುದು. ಅಭ್ಯರ್ಥಿಗಳು ವೆಚ್ಚ ಮಾಡುವ ಮೊತ್ತದ ಮೇಲೆ ನಿಗಾವಹಿಸಲು 234 ಸಹಾಯಕ ವೆಚ್ಚ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಚುನಾವಣಾ ಕಾರ್ಯಕ್ಕಾಗಿ ರಾಜ್ಯದೆಲ್ಲೆಡೆ 3.51 ಲಕ್ಷ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಇದನ್ನು ಹೊರತುಪಡಿಸಿ 17,276 ಮಂದಿಯನ್ನು ಸೂಕ್ಷ್ಮ ವೀಕ್ಷಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಕಡ್ಡಾಯವಾಗಿ ಚುನಾವಣೆ ಖರ್ಚು ವೆಚ್ಚದ ಲೆಕ್ಕವನ್ನು ಅಧಿಕಾರಿಗಳಿಗೆ ನೀಡುವುದು ಕಡ್ಡಾಯವಾಗಿದೆ.

-ಇಂದಿನಿಂದ ಏಪ್ರಿಲ್ 20ರವರೆಗೆ ನಾಮಪತ್ರ ಸಲ್ಲಿಕೆ
-ಏ.21 ನಾಮಪತ್ರಗಳ ಪರಿಶೀಲನೆ
-ಏ.24 ನಾಮಪತ್ರ ವಾಪಸ್​ ಪಡೆಯಲು ಕೊನೆಯ ದಿನ
-ಮೇ 10 ಒಂದೇ ಹಂತದಲ್ಲಿ ಮತದಾನ
-ಮೇ 13ರಂದು ಫಲಿತಾಂಶ


Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top