ಸಂಪಾಜೆ : ಕಾರು ಮತ್ತು ಕೆಎಸ್ಆರ್ಟಿಸಿ ಬಸ್ಸ್ ನಡುವೆ ಭೀಕರ ಅಪಘಾತವು ಮಾಣಿ-ಮೈಸೂರು ರಾ.ಹೆದ್ದಾರಿಯ ಸಂಪಾಜೆ ಎಂಬಲ್ಲಿ ಸಂಭವಿಸಿದೆ. ರಾಜ್ಯ ರಸ್ತೆ ಸಾರಿಗೆ ಬಸ್ಸು ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಮಕ್ಕಳು, ಇಬ್ಬರು ಮಹಿಳೆಯರು, ಓರ್ವ ಗಂಡಸು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಆರು ಜನ ಸಾವನ್ನಪ್ಪಿದ್ದು, ಮೃತದೇಹವನ್ನು ಸುಳ್ಯದ ಖಾಸಗಿ ಆಸ್ಪತ್ರೆ ಹಾಗೂ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.