ಪುತ್ತೂರು: ಪುತ್ತೂರು-ಸುಳ್ಯ ಮುಖ್ಯರಸ್ತೆಯ ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ ನಡೆಯಿತು.
ತರಬೇತಿ ಕಾರ್ಯಕ್ರಮವನ್ನು ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು ಉದ್ಘಾಟಿಸಿ ಶುಭ ಹಾರೈಸಿದರು.

ಸಂಪನ್ಮೂಲ ವ್ಯಕ್ತಿ ವಿಜಯ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಜಯರಾಮ್ ರೈ ವಿದ್ಯಾರ್ಥಿಗಳಿಗೆ ಕಲಿಕೆಗೆ ಸಂಬಂಧಿಸಿ ಸಾಲ ಸೌಲಸೌಲಭ್ಯದ ಸಂಪೂರ್ಣ ಮಾಹಿತಿ ನೀಡಿದರು.

ಕೆರಿಯರ್ ಕೌನ್ಸಿಲರ್ ಮಹಮ್ಮದ್ ರಫೀಕ್ ಮಾತನಾಡಿ, ವಿದ್ಯಾರ್ಥಿಗಳು ಕೋರ್ಸ್ ಆಯ್ಕೆ ಮಾಡುವಾಗ ಇತರರಿಂದ ಪ್ರೇರಿತರಾಗಬಾರದು. ಬದಲಾಗಿ ತನ್ನ ಸಾಮರ್ಥ್ಯವನ್ನು ಅರಿತುಕೊಂಡು ಕೋರ್ಸ್ ಆಯ್ಕೆ ಮಾಡಿದರೆ ನಿಮ್ಮ ಇಚ್ಚೆಯ ಕ್ಷೇತ್ರಕ್ಕೆ ಕಾಲಿಡಬಹುದು ಜತೆಗೆ ಸಾಧನೆ ಮಾಡಬಹುದು ಎಂದ ಅವರು, ಸಾಮಾನ್ಯ ಕೋರ್ಸಿಗಿಂತ ವೃತ್ತಿಯಾಧಾರಿತ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಂಡರೆ ವೃತ್ತಿ ಕ್ಷೇತ್ರದಲ್ಲಿ ವಿವಿಧ ಅವಕಾಶಗಳನ್ನು ಗಳಿಸಬಹುದು ಎಂದು ಕಿವಿಮಾತು ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ಡಾಟಾ ಎಂಟ್ರಿ ವಿಭಾಗದ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ನೀಡಲಾಯಿತು. ಆಡಳಿತಾಧಿಕಾರಿ ಅರ್ಪಿತ್ ಟಿ. ಎ. ಸ್ವಾಗತಿಸಿದರು. ಉಪನ್ಯಾಸಕಿ ಆಶಿಕಾ ಫರ್ಝಾನಾ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಭವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಪ್ರಾಂಶುಪಾಲ ಸಂಪತ್ ಪಕ್ಕಳ, ಎಂ.ಡಿ. ಕಲಾವತಿ ನಡುಬೈಲು, ಗವರ್ನಿಂಗ್ ಕೌನ್ಸಿಂಗ್ ಸದಸ್ಯರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.