ರಾಜಕಾರಣಕ್ಕೆ ನಿವೃತಿ ಘೋಷಿಸಿ ಪ್ರಚಾರ ಕಾರ್ಯದಿಂದ ದೂರ ಹೇಳಿಕೆಯನ್ನು ಹಿಂಪಡೆದ ಎಸ್.ಅಂಗಾರ

ಸುಳ್ಯ: ಈ ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ವಂಚಿತರಾದ ಸಚಿವ ಎಸ್.ಅಂಗಾರ ಅವರು ಅಕ್ರೀಯ ರಾಜಕಾರಣದಿಂದ ನಿವೃತ್ತಿ ಘೋಷಿಸಿ ಚುನಾವಣಾ ಪ್ರಚಾರ ಕಾರ್ಯದಿಂದ ಹಿಂದೆ ಸರಿದಿದ್ದೇನೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ಇದೀಗ ಅವರು ಹಿಂಪಡೆದಿದ್ದಾರೆ.

ಸುಳ್ಯದಲ್ಲಿ ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಸಚಿವ ಅಂಗಾರ ಅವರು, ಸಕ್ರೀಯ ರಾಜಕಾರಣಕ್ಕೆ ನಿವೃತ್ತಿ ಹೇಳಿಕೆ ನೋವಿನಿಂದ ಹೇಳಿದ್ದೇನೆ . ಆದರೆ ನಾನು ಮೊದಲಿನಂತೆ ಸಕ್ರೀಯವಾಗಿದ್ದು ಭಾಗೀರಥಿ ಮುರುಳ್ಯ ಅವರ ಗೆಲುವೊಂದೇ ನಮ್ಮ ಮುಂದಿನ ನಡೆ ಎಂದಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಚಾರ ಸಮಿತಿ ಮುಖ್ಯಸ್ಥ ವೆಂಕಟ್ ದಂಬೆಕೋಡಿ ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top