ಚಿಕ್ಕಮಗಳೂರು : ಮಹಿಳೆಯೋರ್ವರು ಪೊಲೀಸ್ ಠಾಣೆಯ ಮಹಡಿ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಎ. 14 ರಂದು ಮೂಡಿಗೆರೆಯಲ್ಲಿ ಬೆಳಗ್ಗೆ ಸಂಭವಿಸಿದೆ. ಶಿಲ್ಪ ಎಂಬುವವರೇ ಆತ್ಮಹತ್ಯೆ ಯತ್ನಿಸಿದ ಮಹಿಳೆ. ವಿಷಯ ತಿಳಿದ ಪೊಲೀಸರು ಮಹಿಳೆಯನ್ನು ರಕ್ಷಿಸುವಲ್ಲಿ ಯಶಸ್ವುಯಾಗಿದ್ದಾರೆ.
ಮಹಿಳೆಗೆ ಪ್ರಕರಣವೊಂದರಲ್ಲಿ ಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು. ಇದರಿಂದ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ವರದಿಯಾಗಿದೆ. ಶಿಲ್ಪ ಮತ್ತು ಆಕೆಯ ಅಕ್ಕನ ನಡುವೆ ಗಲಾಟೆ ಹಾಗೂ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿ 2022 ರಲ್ಲಿ ಮೂಡಿಗೆರೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಶಿಲ್ಪ ವಿರುದ್ಧ ಸಮನ್ಸ್ ಜಾರಿಯಾಗಿತ್ತು ಎಂದು ತಿಳಿದು ಬಂದಿದೆ.
ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.