ಪುತ್ತೂರು: ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.
ಶಾಲಾ ಹಿರಿಯ ಶಿಕ್ಷಕ ರಾಧಾಕೃಷ್ಣ ರೈ ಅಂಬೇಡ್ಕರ್ ಕುರಿತು ಮಾತನಾಡಿ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ರನ್ನು ನಾವು ದೇವತಾ ಮನುಷ್ಯರಂತೆ ಕಾಣಬೇಕು. ಅವರು ಸಂವಿಧಾನದ ರಚನೆಯ ಮೂಲಕ ದೇಶದ ಸಮಸ್ತ ಪ್ರಜೆಗಳ ಏಳಿಗೆಗಾಗಿ ಶ್ರಮಿಸಿದ ಭಾರತ ಕಂಡ ಮಹಾನ್ ಚೇತನ” ಎಂದು ಹೇಳಿದರು.
ಶಾಲಾ ಮುಖ್ಯ ಶಿಕ್ಷಕ ಸತೀಶ್ ಕುಮಾರ್ ರೈ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಭಾಸ್ಕರ್ ಗೌಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಾಲಾ ಎಸ್ಟೇಟ್ ಮ್ಯಾನೇಜರ್ ಚರಣರಾಜ್, ಶಿಕ್ಷಕ- ಕ್ಷಕೇತರ ಸ್ಕೌಟ್ಸ್ ಮತ್ತು ನಿವೇದಿತಾ ಗೈಡ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.