ಪುತ್ತೂರು: ಗಾಂಜಾ ಎಲೆ ಹಾಗೂ ಹೂ ಮಾರಾಟ ಮಾಡಲು ಯತ್ನಿಸಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗೆ ಪುತ್ತೂರಿನ 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ತಾಲೂಕಿನ ಬಲ್ನಾಡು, ಬೆಳಿಯೂರುಕಟ್ಟೆ ನಿವಾಸಿ ಇಕ್ಬಾಲ್ ಯಾನೆ ಇಕ್ಕುಗೆ ಜಾಮೀನು ಮಂಜೂರು ಮಾಡಿದೆ.
ಆರೋಪಿ ಪ್ಲಾಸ್ಟಿಕ್ ಕವರ್ ನಲ್ಲಿ ಗಾಂಜಾ ಎಲೆ ಹಾಗೂ ಹೂ ಮಾರಾಟ ಮಾಡುತ್ತಿದ್ದ ಸಂದರ್ಭ ಪು್ತ್ತೂರು ನಗರ ಪೊಲೀಸರು ಆತನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಪುತ್ತೂರಿನ 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ಜಾಮೀನು ಮಂಜೂರು ಮಾಡಿದೆ.
ಆರೋಪಿ ಪರವಾಗಿ ನ್ಯಾಯವಾದಿಗಳಾದ ಹರೀಶ್ ಕುಮಾರ್ ಬಳಕ್ಕ, ದೀಪಕ್ ಬೊಳುವಾರು, ಅಕ್ಷತಾ ಬನಾರಿ ವಾದಿಸಿದ್ದರು.