ಕಂದಕಕ್ಕೆ ಉರುಳಿ ಬಿದ್ದ ಬಸ್‌ : 12 ಮಂದಿ ಸಾವು, 25 ಮಂದಿ ಗಾಯ

ಮಹಾರಾಷ್ಟ್ರ : ಮಹಾರಾಷ್ಟ್ರ ರಾಜ್ಯದಲ್ಲಿ ಜವರಾಯ ಅಟ್ಟಹಾಸ ಮೆರದಿದ್ದು, ಖಾಸಗಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡು, 12 ಮಂದಿ ದುರ್ಮರಣವನ್ನಪ್ಪಿರುವ ಘಟನೆ ರಾಯಗಢದ ಪುಣೆ- ಮುಂಬೈ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ 4 ಗಂಟೆಗೆ ಸಂಭವಿಸಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.

40 ಜನರಿದ್ದ ಖಾಸಗಿ ಬಸ್​ ಪುಣೆಯಿಂದ ಮುಂಬೈ ಕಡೆಗೆ ಹೋಗುತ್ತಿದ್ದು. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಪ್ರಯಾಣಿಕರು ನಿದ್ರೆಯಲ್ಲಿದ್ದಾಗ ಪುಣೆ ಮುಂಬೈ ಹೆದ್ದಾರಿಯ ಖೋಪೋಲಿಯಲ್ಲಿ ವೇಗವಾಗಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ. ಇದರಿಂದ ಬಸ್​ ನುಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ 12 ಮಂದಿ ಅಸುನೀಗಿದ್ದಾರೆ. 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ.

ಮಾಹಿತಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಬಂದ ರಕ್ಷಣಾ ಪಡೆ ಸಿಬ್ಬಂದಿ ಬಸ್​​​ನಲ್ಲಿದ್ದ ಜನರನ್ನು ರಕ್ಷಣೆ ಮಾಡಿದರು. ಬಸ್​ ಬಿದ್ದ ರಭಸದ ಆಧಾರದ ಮೇಲೆ ಅತಿಯಾದ ವೇಗವೇ ಇದಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top