ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಇಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಆಗಮಿಸಲಿದ್ದು, ಈ ಹಿನ್ನಲೆಯಲ್ಲಿ ಬಲ್ನಾಡು ದೈವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಮಲ್ಲಿಗೆ, ಹರಕೆ ಸರ್ಪಿಸಲು ಅವಕಾಶ ಕಲ್ಪಿಸಲಾಗಿದೆ.
ಇಂದು ರಾತ್ರಿ ಬಲ್ನಾಡಿನಿಂದ ಶ್ರೀ ದಂಡನಾಯಕ ಉಳ್ಳಾಲ್ತಿ ದೈವ ಹಾಗೂ ಪರಿವಾರ ದೈವಗಳ ಕಿರುವಾಳು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬರಲಿದೆ. ಈ ನಿಟ್ಟಿನಲ್ಲಿ ಈ ಬಾರಿ ಬಲ್ನಾಡಿನ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಮಲ್ಲಿಗೆಯನ್ನು ಅರ್ಪಿಸುತ್ತಿದ್ದಾರೆ. ಪ್ರತಿ ವರ್ಷ ಸಂಜೆ ವೇಳೆ ಮಲ್ಲಿಗೆ ಅರ್ಪಿಸಲಾಗುತ್ತಿತ್ತು. ಈ ಬಾರಿ ಬದಲಾವಣೆ ಮಾಡಲಾಗಿದೆ.
ಮಲ್ಲಿಗೆ ಪ್ರಿಯೆ ಉಳ್ಳಾಲ್ತಿ ಅಮ್ಮನಿಗೆ ಪುತ್ತೂರು ನಗರದ ಉಳ್ಳಾಲ್ತಿ ಕಟ್ಟೆಯಲ್ಲಿ ಮಲ್ಲಿಗೆ ಅರ್ಪಿಸಲು ಬೆಳಿಗ್ಗೆಯಿಂದಲೇ ಮಲ್ಲಿಗೆ ಸ್ಟಾಲ್ ಗಳನ್ನು ತೆರೆದಿರುವುದು ಕಂಡು ಬಂದಿತ್ತು. ಚೆಂಡು ಒಂದರ ಮಲ್ಲಿಗೆ ದರ 100 ರೂಪಾಯಿ ಆಗಿತ್ತು. ಈ ಬಾರಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಹಿಂದುತ್ವದ ಮಲ್ಲಿಗೆ ಶೀರ್ಷಿಕೆಯಡಿ 10 ಮಲ್ಲಿಗೆ ಸ್ಟಾಲ್ ಗಳನ್ನು ತೆರೆಯಲಾಗಿದೆ.