ಬೆಂಗಳೂರು : ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಅಕ್ರಮಗಳಿಗೆ ಸಹಕರಿಸದಂತೆ ಹೋಟೆಲ್ ಮಾಲೀಕರಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಗುಂಪು ಗುಂಪಾಗಿ ಹೋಟೆಲ್‌ಗಳಿಗೆ ಭೇಟಿ ನೀಡಿದಾಗ ಮತ್ತು ಅಭ್ಯರ್ಥಿಗಳ ಪರವಾಗಿ ಯಾರೇ ಚೀಟಿ ಅಥವಾ ಟೋಕನ್ ನೀಡಿ ಊಟ, ಉಪಹಾರ ನೀಡುವಂತೆ ಕೋರಿದಲ್ಲಿ ಅಂತಹವರ ಮಾಹಿತಿಯನ್ನು ಹೋಟೆಲ್ ಮಾಲೀಕರು ಜಿಲ್ಲಾಡಳಿತಕ್ಕೆ ನೀಡಬೇಕಿದೆ.
ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪ್ರಚಾರಕ್ಕೆ ತಗಲುವ ಎಲ್ಲ ವೆಚ್ಚಗಳನ್ನು ಚುನಾವಣಾ ವೆಚ್ಚ ವೀಕ್ಷಕರು ಅಭ್ಯರ್ಥಿಯ ಲೆಕ್ಕದಲ್ಲಿ ದಾಖಲು ಮಾಡುತ್ತಾರೆ. ಆದ್ದರಿಂದ ಊಟ, ಉಪಹಾರದ ವೆಚ್ಚಗಳನ್ನು ಸಹ ಅಭ್ಯರ್ಥಿಗಳ ಲೆಕ್ಕದಲ್ಲಿ ದಾಖಲಿಸಬೇಕಾಗುತ್ತದೆ. ಹೀಗಾಗಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಕೈಗೊಳ್ಳುವ ವೆಚ್ಚಗಳ ಬಗ್ಗೆ ನಿಗಾ ವಹಿಸಲಾಗುತ್ತಿದ್ದು ಹೋಟೆಲ್, ಬಾರ್ ಮಾಲೀಕರು ಸಹರಿಸಬೇಕು ಎಂದು ಮನವಿ ಮಾಡಲಾಗಿದೆ. ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮತದಾರರ ಸಹಾಯವಾಣಿ/ ಕಂಟ್ರೋಲ್ ರೂಂ 1950 ಸ್ಥಾಪನೆ ಮಾಡಲಾಗಿದೆ. ಜನರು ಸಹ ಚುನಾವಣಾ ಅಕ್ರಮಗಳ ಕುರಿತು C-VIGIL ಅಪ್ಲಿಕೇಶನ್ ಮೂಲಕ ದೂರು ನೀಡಲು ಅವಕಾಶ ಕಲ್ಪಿಸಲಾಗಿದೆ.