ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ಮಧ್ಯೆ ಘರ್ಷಣೆ

ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ ಪುಡಿ

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಸಂಘರ್ಷ ನಡೆದ ಘಟನೆ ಏ. 17 ರಂದು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸಂಭವಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಸೇರಿದ ಕಾರಿನ ಗಾಜು ಪುಡಿ ಪುಡಿ ಮಾಡಲಾಗಿದೆ.

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ನಾಮಪತ್ರ ಸಲ್ಲಿಸಿ ವಾಪಾಸ್ ತೆರಳುತ್ತಿದ್ದಾಗ ರಕ್ಷಿತ್ ಶಿವರಾಂ ರೋಡ್ ಶೋ ನಡೆಸಿದ್ದು, ಈ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ನಂತರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top