ಪುತ್ತೂರು: ಇನ್ನು ಕೆಲವೇ ಕ್ಷಣಗಳಲ್ಲಿ ಅರುಣ್ ಕುಮಾರ್ ಪುತ್ತಿಲ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಮೊದಲು ದರ್ಬೆಯಿಂದ ಪುತ್ತೂರು ತಾಲೂಕು ಆಡಳಿತ ಸೌಧದವರೆಗೆ ಬೃಹತ್ ಮೆರವಣಿಗೆ ಸಾಗಿ ಬರಲಿದೆ.

ದರ್ಬೆ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ.
ಮೆರವಣಿಗೆಗೆ ಮೊದಲು ಮಾತನಾಡಿದ ಅರುಣ್ ಕುಮಾರ್ ಪುತ್ತಿಲ, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.