ಪುತ್ತೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಏ.19 ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ.
ನಗರದ ದರ್ಬೆ ವೃತ್ತದಿಂದ ಮೆರವಣಿಗೆಯಲ್ಲಿ ಸಾಗಿ ಮುಖ್ಯರಸ್ತೆಯಲ್ಲಿ ಆಗಮಿಸಿ ಪುತ್ತೂರು ಆಡಳಿತ ಸೌಧದಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ
ಪಕ್ಷದ ಕಾರ್ತಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಭಾಸ್ಕರ ಗೌಡ ಕೋಡಿಂಬಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
























