ಜಿ ಪರಮೇಶ್ವರ್​ ನಾಮಪತ್ರ ಸಲ್ಲಿಕೆ ವೇಳೆ ಕಲ್ಲು ತೂರಾಟ

ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಜಿ. ಪರಮೇಶ್ವರ್ ನಾಮಪತ್ರ ಸಲ್ಲಿಸಲು ತೆರಳಿದ ವೇಳೆ ಕಿಡಿಗೇಡಿ‌ಗಳಿಂದ ಕೊರಟಗೆರೆ ತಾಲೂಕು ಕಚೇರಿ ಮೇಲೆ ಕಲ್ಲು ತೂರಾಟ ಮಾಡಿರುವಂತಹ ಘಟನೆ ನಡೆದಿದೆ. ಕಲ್ಲು ತೂರಾಟ ವೇಳೆ ಮಹಿಳಾ ಪೊಲೀಸ್​ ಸಿಬ್ಬಂದಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ನಾಮಪತ್ರ ಸಲ್ಲಿಕೆ ಬಳಿಕ ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದು, ಕಚೇರಿ ಮೇಲೆ ಯಾರು ಕಲ್ಲು ಎಸೆದರು ಅಂತಾ ನನಗೆ ಗೊತ್ತಿಲ್ಲ. ನಾನು ನಾಮಪತ್ರ ಸಲ್ಲಿಸಲು ಒಳಗೆ ಹೋದಾಗ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರ ಬಳಿ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದರು.

ಡಿಕೆಶಿಗೆ ಆ್ಯಪಲ್ ಹಾರ : ಆ್ಯಪಲ್ ಕಿತ್ತುಕೊಳ್ಳಲು ಕಾರ್ಯಕರ್ತರ ನಡುವೆ ತಳ್ಳಾಟ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮುಖಂಡರು ಆ್ಯಪಲ್​ ಹಾರ ಹಾಕಿದ್ದರು. ಈ ವೇಳೆ ಹಾರದಲ್ಲಿದ್ದ ಸೇಬು ಕಿತ್ತುಕೊಳ್ಳಲು ಕಾರ್ಯಕರ್ತರ ನಡುವೆ ತಳ್ಳಾಟ ನಡೆದಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಪೊಲೀಸರು ಲಾಠಿಚಾರ್ಜ್ ಮಾಡುವ ಮೂಲಕ ಕಾರ್ಯಕರ್ತರನ್ನು ಚದುರಿಸಿದ್ದಾರೆ. ​​































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top