ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಬ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಗುರುವಾರ ನಾಮಪತ್ರ ಸಲ್ಲಿಸಿದರು.
ಬುಧವಾರ ತನ್ನ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸುವ ಪ್ರಕಟಣೆ ನೀಡಿದ್ದರು. ಯಾವುದೋ ಕಾರಣಗಳಿಂದ ನಾಮಪತ್ರ ಸಲ್ಲಿಕೆಯಾಗಿಲ್ಲ. ಗುರುವಾರ ಬೆಳಿಗ್ಗೆ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಐ.ಸಿ.ಕೈಲಾಸ್, ಮಹಿಳಾ ಪದಾಧಿಕಾರಿಗಳಾದ ಝೊಹರಾ ನಿಸಾರ್, ಪದ್ಮಾಮಣಿ ಉಪಸ್ಥಿತರಿದ್ದರು.

























