ಬಿಜೆಪಿ ರಾಜ್ಯಾಧ್ಯಕ್ಷರಿಗೆ ಏಕವಚನದಲ್ಲಿ ಬೈಯುವ ಆಡಿಯೋ ವೈರಲ್ | ದುಷ್ಕರ್ಮಿ ವಿರುದ್ಧ ಪೊಲೀಸರಿಗೆ ದೂರು

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಏಕವಚನದಲ್ಲಿ ಅವ್ಯಾಚವಾಗಿ ಬೈಯುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ಗೆದ್ದ ಸಂದರ್ಭ ಮುಸ್ಲಿಂ ಧರ್ಮಗುರುಗಳು ತಮ್ಮ ಬೆಂಬಲಿಗರೊಂದಿಗೆ ನಳಿನ್ ಅವರನ್ನು ಭೇಟಿ ಮಾಡಿ ಹೂಗುಚ್ಛ ನೀಡಿ ಅಭಿನಂದಿಸಿ ಫೋಟೊ ತೆಗೆಸಿಕೊಂಡಿದ್ದರು.

ಈ ಫೋಟೊವನ್ನು ದುಷ್ಕರ್ಮಿಯೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಲ್ಲದೆ ನಳಿನ್ ಕುಮಾರ್ ಕಟೀಲ್ ಅವರಿಗೆ ಏಕವಚನದಲ್ಲಿ ಬೈಯುವ ಆಡಿಯೋ ವೈರಲ್‍ ಮಾಡಿದ್ದಾನೆ. ಈ ಕುರಿತು ಬಿಜೆಪಿ ಕಾನೂನು ಪ್ರಕೋಷ್ಠ ಪೊಲೀಸರಿಗೆ ದೂರು ನೀಡಿದೆ.































 
 

ದುಷ್ಕರ್ಮಿಯನ್ನು ಪತ್ತೆ ಹಚ್ಚಿನ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ ಎಂದು ಜಿಲ್ಲಾ ವಕ್ತಾರ ಜಗದೀಶ ಶೇಣವ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top