ಮೋದಿ ಉಪನಾಮ ಅವಹೇಳನ : ತಡೆಯಾಜ್ಞೆ ನೀಡಲು ಕೋರ್ಟ್ ನಕಾರ

ಅರ್ಜಿ ವಜಾಗೊಳಿಸಿದ ನ್ಯಾಯಾಲಯ

ಸೂರತ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮೋದಿ ಉಪನಾಮದ ಅವಹೇಳನಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯ ಶಿಕ್ಷೆಗೆ ತಡೆಯಾಜ್ಞೆ ನೀಡಲು ಸೂರತ್ ಕೋರ್ಟ್ ನಿರಾಕರಿಸಿದೆ.
ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಈ ಹಿಂದೆ ರಾಹುಲ್ ಗಾಂಧಿಯವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದಕ್ಕೆ ನ್ಯಾಯಾಲಯ ನಿರಾಕರಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ. ಏಪ್ರಿಲ್ 3 ರಂದು ಪ್ರಕರಣದಲ್ಲಿ ಅಪರಾಧ ಸಾಬೀತಾದ ನಂತರ ಮೇಲ್ಮನವಿ ಸಲ್ಲಿಸಿದ್ದ ರಾಹುಲ್ ಗಾಂಧಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿತ್ತು.

ಸೂರತ್‌ ನ ನ್ಯಾಯಾಲಯವು ಮಾ. 23 ರಂದು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಅನರ್ಹಗೊಂಡಿದ್ದಾರೆ.
2019ರ ಲೋಕಸಭೆ ಚುನಾವಣೆ ವೇಳೆ ಭಾಷಣ ಮಾಡಿದ್ದ ರಾಹುಲ್ ಗಾಂಧಿ ಅವರು, ಮೋದಿ ಎಂಬ ಹೆಸರು ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದರು.
ರಾಹುಲ್​ ಹೇಳಿಕೆಯಿಂದ ಸಿಟ್ಟಿಗೆದ್ದಿದ್ದ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ, ದೂರು ದಾಖಲು ಮಾಡಿದ್ದರು. 2019ರ ಏಪ್ರಿಲ್​​​ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್​​ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಗುಜರಾತ್​ನ ಸೂರತ್ ನ್ಯಾಯಾಲಯವು ಮಾರ್ಚ್ 23 ರಂದು ಮಹತ್ವದ ತೀರ್ಪು ನೀಡಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top