ಅಫಘಾತದಲ್ಲಿ ಗಾಯಗೊಂಡ ಬಾಲಕಿಯನ್ನು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ

ಪುತ್ತೂರು: ಅಪಘಾತದಲ್ಲಿ ಗಾಯಗೊಂಡ ಬಾಲಕಿಯನ್ನು ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ತಮ್ಮ ಕಾರಿನಲ್ಲಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕಳುಹಿಸಿಕೊಟ್ಟು ಮಾನವೀಯತೆ ಮೆರೆದ ಘಟನೆ ಶುಕ್ರವಾರ ನಡೆದಿದೆ.

ಪ್ರಚಾರದ ಹಿನ್ನಲೆಯಲ್ಲಿ ಜಿಡೆಕಲ್ಲು ರಸ್ತೆಯಾಗಿ ಬರುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದ ಬಾಲಕಿಗೆ ವಾಹನವೊಂದು ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಬಾಲಕಿಯನ್ನು ಆಶಾ ತಿಮ್ಮಪ್ಪ ಅವರು ತಮ್ಮ ಕಾರಿನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ತಮ್ಮ ಕಾರ್ಯಕರ್ತರ ಜತೆ ಮಂಗಳೂರಿನ ಆಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಕಳುಹಿಸಿಕೊಟ್ಟಿದ್ದಾರೆ.

ಚುನಾವಣಾ ಒತ್ತಡದ ನಡುವೆಯೂ ಮಾನವೀಯತೆ ಮೆರೆದು ಪ್ರಶಂಸೆಗೆ ಒಳಗಾಗಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top