ಬೆಂಗಳೂರು : ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದದಲ್ಲಿ ಕೌಶಿಕ್ ಉತ್ತಮ ಸಾಧನೆ ಮೂಲಕ ಟಾಪರ್ಸ್‌ಗಳಾಗಿ ಮಿಂಚಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಮಂಗಳೂರು ಮೂಡಬಿದ್ರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ 600ಕ್ಕೆ 600 ಅಂಕಗಳನ್ನು ಪಡೆದುಕೊಂಡಿದ್ದು, ಬೆಂಗಳೂರಿನ ಜಯನಗರದ ಎನ್ಎಂಕೆಆರ್‌ವಿ ಕಾಲೇಜು ಕಲಾ ವಿಭಾಗದ ವಿದ್ಯಾರ್ಥಿನಿ ತಬಸ್ಸುಮ್ 600ಕ್ಕೆ 593 ಅಂಕಗಳನ್ನು ಪಡೆದುಕೊಂಡಿದ್ದಾರೆ. ಅಂತೆಯೇ ಕೋಲಾರದ ಗಂಗೋತ್ರಿ ಕಾಲೇಜು ವಿದ್ಯಾರ್ಥಿ ಕೌಶಿಕ್ ವಿಜ್ಞಾನ ವಿಭಾಗದಲ್ಲಿ 600ಕ್ಕೆ 596 ಅಂಕಗಳನ್ನು ಪಡೆದುಕೊಂಡು ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.
ಇನ್ನು ದಕ್ಷಿಣ ಕನ್ನಡ ಮೊದಲ ಸ್ಥಾನ ಪಡೆದುಕೊಂಡಿದೆ. ಉಡುಪಿ ಜಿಲ್ಲೆಗೆ ಎರಡನೇ ಸ್ಥಾನ, ಕೊಡಗು ಜಿಲ್ಲೆಗೆ ಮೂರನೇ ಸ್ಥಾನ, ಉತ್ತರ ಕನ್ನಡ ಜಿಲ್ಲೆಗೆ ನಾಲ್ಕನೇ ಸ್ಥಾನ, ಯಾದಗಿರಿಗೆ ಕೊನೆಯ ಸ್ಥಾನ ಸಿಕ್ಕಿದೆ. ಬೆಂಗಳೂರು ಗ್ರಾಮಾಂತರ ಒಂಬತ್ತನೇ ಸ್ಥಾನ, ಬೆಂಗಳೂರು ಉತ್ತರ ಜಿಲ್ಲೆಗೆ ಹನ್ನೊಂದನೆ ಸ್ಥಾನ ಸಿಕ್ಕಿದೆ. ಒಟ್ಟು 524,409 ವಿದ್ಯಾರ್ಥಿಗಳು ಪಾಸಾಗಿದ್ದಾರೆ ಶೇ.74.67 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.