ಪುತ್ತೂರು: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ವಿವಿಧ ಪಕ್ಷ ಸಹಿತ ಪಕ್ಷೇತರದಿಂದ ಒಟ್ಟು 13 ನಾಮಪತ್ರ ಸಲ್ಲಿಕೆಯಾಗಿದ್ದು, ಎಲ್ಲಾ ನಾಮಪತ್ರಗಳೂ ಸಿಂಧು ಎಂದು ಚುನಾವಣಾಧಿಕಾರಿ, ಸಹಾಯಕ ಆಯುಕ್ತ ಗಿರೀಶ್ ನಂದನ್ ತಿಳಿಸಿದ್ದಾರೆ.
ಶುಕ್ರವಾರ ನಾಮಪತ್ರ ಪರಿಶೀಲನೆ ಪ್ರಕ್ರಿಯೆ ನಡೆಸಿದ್ದು, ಎಲ್ಲಾ 10 ಅಭ್ಯರ್ಥಿಗಳ ನಾಮಪತ್ರ ಸಿಂಧುವಾಗಿದೆ ಎಂದು ಸಹಾಯಕ ಆಯುಕ್ತರು ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಪ್ರಕ್ರಿಯೆ ಆರಂಭಗೊಂಡಿತ್ತು. ನಾಮಪತ್ರ ಸಲ್ಲಿಸಲು ಏ.20 ಕೊನೆಯ ದಿನಾಂಕವಾಗಿತ್ತು.
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ, ಕಾಂಗ್ರೆಸ್ ನ ಅಶೋಕ್ ಕುಮಾರ್ ರೈ, ಜೆಡಿಎಸ್ ನ ದಿವ್ಯಪ್ರಭಾ ಚಿಲ್ತಡ್ಕ, ಆಮ್ ಆದ್ಮಿಯ ಡಾ.ವಿಶು ಕುಮಾರ್, ಎಸ್‍ಡಿಪಿಐ ಯ ಇಬ್ರಾಹಿಂ ಸಾಗರ್, ಇಸ್ಮಾಯಿಲ್ ಶಾಫಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಐವನ್ ಘೆರಾವೊ ಪಿ., ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ, ಮಹಮ್ಮದ್ ಅಶ್ರಫ್ ಕಲ್ಲೇಗ, ಸುಂದರ ಕೊಯಿಲ, ನಾಮಪತ್ರ ಸಲ್ಲಿಸಿದ್ದರು.
ಈ ಪೈಕಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ, ಕಾಂಗ್ರೆಸ್ ಅಭ್ಯರ್ಥಿ ಆಶೋಕ್ ಕುಮಾರ್ ರೈ ಹಾಗೂ ಪಕ್ಷೇತರ ಅಭ್ಯರ್ಥಿಗಳು ತಲಾ ಎರಡು ನಾಮಪತ್ರ ಸಲ್ಲಿಸಿದ್ದಾರೆ.
ಮೇ.10 ರಂದು ಚುನಾವಣೆ, ಮೇ 13 ರಂದು ಮತ ಎಣಿಕೆ ಕಾರ್ಯ ನಡೆದು ಫಲಿತಾಂಶ ಹೊರಬೀಳಲಿದೆ.