ಪುತ್ತೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರೇರಣಾ ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಒಟ್ಟು 53 ವಿದ್ಯಾರ್ಥಿಗಳು ಪ್ರೇರಣಾದಲ್ಲಿ ತರಬೇತಿ ಪಡೆದುಕೊಂಡಿದ್ದು, ಅದರಲ್ಲಿ 10 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. 30 ವಿದ್ಯಾರ್ಥಿಗಳು ಪ್ರಥಮ ದರ್ಜೆ, 13 ಮಂದಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ವಾಣಿಜ್ಯ ವಿಭಾಗದ ಮಹಮ್ಮದ್ ಶಾಝ್ (560), ಎನ್. ಅಮನ್ ಅಡ್ಯಂತ್ತಾಯ (560), ನೆಬಿಸಾ (544), ಹರ್ಷಿದಾ (535), ನಿಯಾಫ್ (524), ಅನ್ಸಫ್ (517), ಅಬ್ದುಲ್ ಅಹದ್ (512), ಮೊಹಮ್ಮದ್ ತೊಯಬ್ (504), ಅರ್ಷಿಯಾ (490), ಅಹಮ್ಮದ್ ಮಿಸ್ಬಾ (482) ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾರೆ ಎಂದು ಪುತ್ತೂರು ಪ್ರಭು ಬಿಲ್ಡಿಂಗಿನಲ್ಲಿ ಕಾರ್ಯಾಚರಿಸುತ್ತಿರುವ ಪ್ರೇರಣಾ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಈಗಾಗಲೇ ಪ್ರೇರಣಾ ಸಂಸ್ಥೆಯಲ್ಲಿ ಸಿಎ ತರಬೇತಿ ಆರಂಭಗೊಂಡಿದ್ದು, ಇದಕ್ಕೆ ಪೂರಕವಾಗಿ ಪ್ರೇರಣಾದಲ್ಲಿ ದ್ವಿತೀಯ ಪಿಯು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಮಾಹಿತಿಗೆ 8904877721, 7204977721 ಸಂಪರ್ಕಿಸುವಂತೆ ಪ್ರೇರಣಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.