ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆ

ಅಗ್ನಿಸಾಕ್ಷಿ ಧಾರಾವಾಹಿ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲೂ ನಟಿಸಿದ್ದರು

ಬೆಂಗಳೂರು : ಕಿರುತೆರೆಯ ಜನಪ್ರಿಯ ಧಾರಾವಾಹಿ ಅಗ್ನಿಸಾಕ್ಷಿಯಲ್ಲಿ ನಟಿಸಿ ಫೇಮಸ್ ಆಗಿದ್ದ ಹಾಗೂ ಸಾಕಷ್ಟು ಸಿನಿಮಾಗಳಲ್ಲೂ ಬಣ್ಣ ಹಚ್ಚಿದ್ದ ಸಂಪತ್ ಜಯರಾಮ್(35) ಅವರು ನಿಧನರಾಗಿದ್ದಾರೆ.

ಕೆಲವು ಕನ್ನಡ ಸಿನೆಮಾ ಹಾಗೂ ದಾರವಾಹಿಗಳಲ್ಲಿ ಸಂಪತ್‌ ಕುಮಾರ್‌ ನಟಿಸಿದ್ದರು. ಆದರೆ ಇತ್ತೀಚೆಗೆ ಕೆಲ ಸಮಯದಿಂದ ಸೂಕ್ತ ಅವಕಾಶ ಸಿಗದೆ ಚಿಂತೆಯಲ್ಲಿದ್ದರು. ಶನಿವಾರ (ಏ.22) ನೆಲಮಂಗಲದಲ್ಲಿರುವ ತಮ್ಮ ನಿವಾಸದಲ್ಲೇ ಸಂಪತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ತಿಳಿದುಬಂದಿಲ್ಲ.































 
 

ವೈವಾಹಿಕ ಜೀವನಕ್ಕೆ ಕಾಲಿಟ್ಟು ಕೇವಲ ಒಂದು ವರ್ಷವಾಗಿತ್ತು. ಯುವ ನಟನ ನಿಧನಕ್ಕೆ ಸ್ನೇಹಿತರು, ಆಪ್ತರು ಕಂಬನಿ ಮಿಡಿದಿದ್ದಾರೆ. ಸದ್ಯ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಅವರ ಮೃತದೇಹವಿದ್ದು, ಹುಟ್ಟೂರಾದ ಎನ್‌ಆರ್‌ಪುರಕ್ಕೆ ರವಾನೆ ಮಾಡಲು ಸಿದ್ಧತೆ ಮಾಡಲಾಗಿದೆ. ಇಷ್ಟು ಚಿಕ್ಕ ವಯಸ್ಸಿಗೆ ಇಂತಹ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದೇಕೆ ಎಂದು ಸ್ನೇಹಿತರು ಕಂಬನಿ ಮಿಡಿದಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top