ಬೆಳ್ತಂಗಡಿ : ನವವಿವಾಹಿತೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿಯಲ್ಲಿ ಸಂಭವಿಸಿದೆ.
ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ಕೌಶಲ್ಯ (26) ಎರಡು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.