ಅಂಬಿಕಾ ವಿದ್ಯಾಲಯದಲ್ಲಿ ಸ್ಮಾರ್ಟ್ ಬೋರ್ಡ್ ಅನಾವರಣ ಹಾಗೂ ಸಾಧಕರಿಗೆ ಸನ್ಮಾನ

ಪುತ್ತೂರು : ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಸ್ಮಾರ್ಟ್ ಬೋರ್ಡ್ ಅನಾವರಣ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸೋಮವಾರ ನಡೆಯಿತು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಸ್ಮಾರ್ಟ್ ಬೋರ್ಡ್ ಅನಾವರಣ ಮಾಡಿ ಮಾತನಾಡಿ, ಪ್ರಸಕ್ತ ದಿನಗಳಲ್ಲಿ ಶೈಕ್ಷಣಿಕ ಕ್ಷೇತ್ರ ಮಾತ್ರವಲ್ಲದೆ ಎಲ್ಲಾ ಕ್ಷೇತ್ರಗಳಲ್ಲಿ ಅತೀವವಾದ ಪೈಪೋಟಿಯಿದೆ. ಇದರಿಂದಾಗಿ ವಿದ್ಯಾರ್ಥಿಗಳು ತಮ್ಮ ಕಲಿಕೆಯ ಜೊತೆಗೆ ಹೊಸ ಹೊಸ ತಂತ್ರಜ್ಞಾನ ದ ಬಳಕೆಯ ಬಗ್ಗೆಯೂ ಅರಿವನ್ನು ಹೊಂದಿದ್ದರೆ ಮುಂದಿನ ದಾರಿ ಸುಗಮವಾಗುತ್ತದೆ ಎಂದರು

ಸಂಸ್ಥೆಯ ಕಾರ್ಯದರ್ಶಿ ಶ್ರೀ ಸುಬ್ರಹ್ಮಣ್ಯ ನಟ್ಟೋಜ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಬಿಕಾ ವಿದ್ಯಾಸಂಸ್ಥೆ ಎಲ್ಲದರಲ್ಲಿಯೂ ಮೇಲುಗೈಯನ್ನು ಸಾಧಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಪತಿಯೊಬ್ಬ ವಿದ್ಯಾರ್ಥಿಯೂ ದೇಶವನ್ನು ತಮ್ಮ ಹೆತ್ತವರನ್ನು ಶಾಶ್ವತವಾಗಿ ಪ್ರೀತಿಸುವ ಮಕ್ಕಳಾಗಿ ,ಜೊತೆಗೆ ವಿದ್ಯಾವಂತರಾಗಿ ಅತೀ ಎತ್ತರಕ್ಕೆ ಬೆಳೆದು ತಮ್ಮ ಹೆಸರನ್ನು ಅಜರಾಮರರಾಗಿ ಉಳಿಸುವಂತೆ ಮಾಡಿ ಎಂದರು.































 
 

ಸಾಧಕರಿಗೆ ಗೌರವ

ಅಂಬಿಕಾ ವಿದ್ಯಾಸಂಸ್ಥೆಯ ಮೇಲೆ ಸದಾ ಪ್ರೀತಿಯಿಟ್ಟು ವಿದ್ಯಾಸಂಸ್ಥೆಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿದ  ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

ಶೈಕ್ಷಣಿಕ ವರ್ಷ 2022-23 ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆ ಯ ವಿದ್ಯಾರ್ಥಿಗಳು ನೂರು ಶೇಕಡಾ ಫಲಿತಾಂಶ ತಂದಿದ್ದು, ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಇತ್ತೀಚಿಗೆ ಜಮ್ಮು ಕಾಶ್ಮೀರದ ಪೂಂಚ್ ನಲ್ಲಿ ನಡೆದ ಧಾಳಿಯಲ್ಲಿ ವೀರ ಮರಣವನ್ನು ಹೊಂದಿದ ಐವರು ಯೋಧರಿಗೆ ನುಡಿನಮನ ಸಲ್ಲಿಸಿ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ವೇದಿಕೆಯಲ್ಲಿ ನಟ್ಟೋಜ ಫೌಂಡೇಶನ್ ಟ್ರಸ್ಟ್ ನ ಕೋಶಾಧಿಕಾರಿ ರಾಜಶ್ರೀ ನಟ್ಟೋಜ , ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಬಪ್ಪಳಿಗೆಯ ಪ್ರಾಂಶುಪಾಲೆ ಸುಚಿತ್ರಾ ಪ್ರಭು ಉಪಸ್ಥಿತರಿದ್ದರು.  

ವಿದ್ಯಾರ್ಥಿಗಳಾದ ವಿಧಾತ್ರಿ, ಶರಧಿ, ವೈಷ್ಣವಿ ಪ್ರಾರ್ಥನೆ ಹಾಡಿದರು. ನೆಲ್ಲಿಕಟ್ಟೆ ಪ.ಪೂರ್ವ ವಿದ್ಯಾಲಯದ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ ಸ್ವಾಗತಿಸಿದರು. ಉಪನ್ಯಾಸಕ ಸುಬ್ರಹ್ಮಣ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top